ಜಿಬಿಎ ವ್ಯಾಪ್ತಿಯಲ್ಲಿ ವಿದ್ಯುತ್ ಮತ್ತು ನೀರಿನ ಸಂಪರ್ಕ ಸಮಸ್ಯೆ: ಸಿಎಂ ನೇತೃತ್ವದಲ್ಲಿ ಸಭೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವಲ್ಲಿ ಇರುವ ತೊಡಕುಗಳ ಕುರಿತಂತೆ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ, ಬೆಂಗಳೂರು ಜಲಮಂಡಳಿ, ಕೆಪಿಟಿಸಿಎಲ್ ಮತ್ತು ಬೆಸ್ಕಾಂನ ಹಿರಿಯ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಬಹುಕಾಲದಿಂದ ಇರುವ ಸಮಸ್ಯೆಗಳು ಮತ್ತು ಇವಕ್ಕೆ ಪರಿಹಾರ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದರು.

ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article