ಬೆಂಗಳೂರು: ಕಳೆದ ಶನಿವಾರ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟಿದ್ದು, ಈ ಬಗ್ಗೆ ನಟ ಟಿವಿಕೆ ಪಕ್ಷದ ನಾಯಕ ವಿಜಯ್ ಅವರು ನನ್ನನ್ನು ಟಾರ್ಗೆಟ್ ಮಾಡಿ, ಅಮಾಯಕ ಜನರನ್ನಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ. ಶೀಘ್ರವೇ ಕಾಲ್ತುಳಿತಕ್ಕೆ ಕಾರಣ ಏನು ಎಂಬ ಸತ್ಯ ಹೊರಬಳೀಲಿದೆ. ಅದುವರೆಗೂ ಕಾಯೋಣ ಎಂದಿದ್ದಾರೆ.
ದುರಂತ ಸಂಭವಿಸಿದ ನಂತರ ಇದೇ ಮೊದಲ ಬಾರಿಗೆ ವಿಜಯ್ ಫೇಸ್ ಬುಕ್ ಮೂಲಕ ತಮ್ಮ ಅನಿಸಿಕೆಯನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಇವರ ಹೇಳಿಕೆಯನ್ನು ಟಿವಿಕೆ ಪಕ್ಷವು ಟ್ವಿಟರ್ ಹಾಗೂ ಫೇಸ್‌ಬುಕ್ ನಲ್ಲಿ ಹಂಚಿಕೊಂಡಿದೆ.
ಸಾರ್ವಜನಿಕರು ನನ್ನ ಮೇಲಿನ ಅಭಿಮಾನದಿಂದ ನನ್ನನ್ನು ನೋಡಲು ಕರೂರಿಗೆ ಬಂದಿದ್ದರು. ಆದರೆ ಅಲ್ಲಿ ದುರಂತವೊಂದು ನಡೆದು ಹೋಯಿತು. ಇದೇ ಮೊದಲ ಬಾರಿಗೆ ನನ್ನ ಜೀವನದಲ್ಲಿ ನಾನು ಇಂತಹ ದುರಂತ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಈ ಪ್ರಕರಣದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಾನು ಸದಾ ಸಂತ್ರಸ್ತರ ಜತೆ ನಿಲ್ಲುತ್ತೇನೆ ಎಂದು ಭರವಸೆ ತುಂಬಿದ್ದಾರೆ.
ಸಮಾವೇಶಗಳಿಗೆ ಆಗಮಿಸುವ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡೇ ಸಮಾವೇಶಗಳನ್ನು ಆಯೋಜಿಸುತ್ತಾ ಬಂದಿರುತ್ತೇನೆ. ಆದರೆ, ಕರೂರಿನಲ್ಲಿ ನಿರೀಕ್ಷೆ ಮೀರಿ ಜನಸಾಗರ ಸೇರಿದ್ದರಿಂದ ಸಮಸ್ಯೆ ಉಂಟಾಗಿದೆ. ಒಂದು ವೇಳೆ ನಾನು ಅಲ್ಲಿಂದ ಹೊಟುರಹೋಗಿದ್ದರೆ ಇನ್ನೂ ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದು ತಿಳಿಸಿದ್ದಾರೆ.