ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಡಿಸಿಎಂ ಶಿವಕುಮಾರ್‌ ಮನವಿ

Most read

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಇಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಸಮೀಕ್ಷೆಗೆ ಚಾಲನೆ ನೀಡಿದ ನಂತರ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿದೆ. ನನ್ನ ಮನೆಯಲ್ಲೂ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆದಾರರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಮಾಹಿತಿ ನೀಡಿದ್ದೇನೆ. ಸಾರ್ವಜನಿಕರು ತಾಳ್ಮೆಯಿಂದ ಮಾಹಿತಿ ಒದಗಿಸಬೇಕು. ಮುಂದಿನ ಪೀಳಿಗೆಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಎಲ್ಲಾ ಜಾತಿ ಸಮುದಾಯದ ಜನರು ಸಹಕಾರ ನೀಡಬೇಕು ಎಂದರು.

ವೈಯಕ್ತಿಕ ಮಾಹಿತಿ ಕುರಿತಾದ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಷಯ. ಆದರೂ ಬೆಂಗಳೂರಿನಲ್ಲಿ ಸಮೀಕ್ಷೆ ನಡೆಸುವಾಗ ಸೂಕ್ಷ್ಮವಾಗಿರಬೇಕು ಎಂದು ಸಮೀಕ್ಷೆದಾರರಿಗೆ ಸಲಹೆ ನೀಡಿದ್ದೇನೆ. ಸಮೀಕ್ಷೆಯಲ್ಲಿ ಹೆಚ್ಚು ಪ್ರಶ್ನೆಗಳಿರುವುದು ನನಗೆ ಅಚ್ಚರಿ ಮೂಡಿಸಿದೆ. ಇವುಗಳನ್ನು ಸರಳೀಕರಣ ಮಾಡಬೇಕಿತ್ತು. ನಗರ ಪ್ರದೇಶದ ಜನರು ಇಷ್ಟೊಂದು ಪ್ರಶ್ನೆಗಳಿಗೆ ಉತ್ತರಿಸುವಷ್ಟು ತಾಳ್ಮೆ ಇರುವುದಿಲ್ಲ ಎಂದು ಉತ್ತರಿಸಿದರು.

More articles

Latest article