ಬಿಹಾರ ವಿಧಾನಸಭಾ ಚುನಾವಣೆ: ನವಂಬರ್‌ 6, 11 ರಂದು ಎರಡು ಹಂತದಲ್ಲಿ ಮತದಾನ; ನ.14 ರಂದು ಫಲಿತಾಂಶ

Most read

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್‌ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆಎಂದು ಭಾರತೀಯ ಚುನಾವಣಾ ಆಯೋಗ ಇಂದುಪ್ರಕಟಿಸಿದೆ.

ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಚುನಾವಣಾ ವಿವರಗಳನ್ನು ನೀಡಿದ್ದಾರೆ.

ಮೊದಲ ಹಂತದಲ್ಲಿ 121 ಹಾಗೂ ಎರಡನೇ ಹಂತದಲ್ಲಿ 122 ವಿಧಾನಸಭೆ ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 10ರಂದು ಮೊದಲನೇ ಹಂತಕ್ಕೆ ಹಾಗೂ ಅಕ್ಟೋಬರ್ 13ರಂದು ಎರಡನೇ ಹಂತಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 (ಮೊದಲನೇ ಹಂತ) ಹಾಗೂ ಅಕ್ಟೋಬರ್ 20 (ಎರಡನೇ ಹಂತ) ಕೊನೆಯ ದಿನಾಂಕವಾಗಿದೆ ಎಂದರು.

ಒಟ್ಟು 243 ಕ್ಷೇತ್ರಗಳಿದ್ದು, 7.43 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೆ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ. ಮೊದಲನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 17; ಎರಡನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20 ಆಗಿರುತ್ತದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಮೊದಲನೇ ಹಂತಕ್ಕೆ ಅಕ್ಟೋಬರ್ 20; ಎರಡನೇ ಹಂತಕ್ಕೆ ಅಕ್ಟೋಬರ್ 23 ಆಗಿರುತ್ತದೆ.

More articles

Latest article