ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ವ್ಯತ್ಯಯ ಉಂಟಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಬುಧವಾರ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಆತಂಕಪಡುವ ಅಗತ್ಯ ಇಲ್ಲ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಇಳಿವಯಸ್ಸಿನಲ್ಲೂ ಸಂಸತ್ ಕಲಾಪದಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದಾರೆ. ರಾಜ್ಯದ ಪರವಾಗಿ ಕಲಾಪದಲ್ಲಿ ಮಾತನಾಡುವ ಅವರು ರಾಜ್ಯದ ಸಮಸ್ಯೆ ಬೇಡಿಕೆಗಳನ್ನು ಕುರಿತು ಪ್ರಧಾನಿ ಸೇರಿದಂತೆ ಅನೇಕ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಲೇ ಇರುತ್ತಾರೆ.
ಇತ್ತೀಚೆಗೆ ಅವರು ಹಾಸನ ಜಿಲ್ಲೆಯಲ್ಲಿ ಟ್ರಕ್ ವೊಂದು ಗಣೇಶ ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದ ಬಳಿಕ ಸಂತ್ರಸ್ಥರ ಕುಟುಂಬ ವರ್ಗದವರವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು.