ಓಸ್ಲೋ: ವೆನಿಜುವೆಲಾದ ನಾಗರೀಕರ ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ವೃತ್ತಿಯಿಂದ ಕೈಗಾರಿಕಾ ಇಂಜಿನಿಯರ್ ಆಗಿರುವ ಇವರು ವೆನೆಜುವೆಲಾದ ಜನರ ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೂ ಈ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರು. 8 ಯುದ್ಧಗಳನ್ನು ನಿಲ್ಲಿಸಿರುವುದರಿಂದ ನಾನು ಈ ಪ್ರಶಸ್ತಿಗೆ ಅರ್ಹ ಎಂದು ಅವರೇ ಹಲವಾರು ಬಾರಿ ಹೇಳಿಕೊಂಡಿದ್ದರು. ಆದರೆ ಆಯ್ಕೆ ಸಮಿತಿ ಅವರ ಹೆಸರನ್ನು ಪರಿಗಣಿಸಿಲ್ಲ.