ಜೈಲಿನಲ್ಲಿ ದರ್ಶನ್‌ ಗೆ ಸೌಲಭ್ಯ: ಪರಿಶೀಲಿಸಿ ವರದಿ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್‌ ಸೂಚನೆ

Most read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಆರೋಪಿ ದರ್ಶನ್ ಗೆ ಕನಿಷ್ಠ ಸೌಲಭ್ಯಗಳನ್ನು ನೀಡುತ್ತಿರುವ ಬಗ್ಗೆ ಸ್ವತಃ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಜೈಲು ಅಧಿಕಾರಿಗಳು ನ್ಯಾಯಾಲಯದ ಆದೇಶವಿದ್ದರೂ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ದರ್ಶನ್‌ ಪರ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶ ನೀಡಿದೆ.  ದರ್ಶನ್‌ ಪರ ವಕೀಲರು ಸ್ವತಃ  ನ್ಯಾಯಾಧೀಶರೇ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂಬ ಮನವಿ ಮಾಡಿದ್ದರು.

ಜೈಲಿನಲ್ಲಿ ದರ್ಶನ್ ಅವರಿಗೆ ಕನಿಷ್ಠ ಸೌಲಭ್ಯ ನೀಡಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ, ಅಕ್ಟೋಬರ್ 18ರೊಳಗೆ ವರದಿ ಸಲ್ಲಿಸಬೇಕು.ಕೋರ್ಟ್ ಆದೇಶದ ಪಾಲನೆ ಸರಿಯಾಗಿ ನಡೆದಿದೆಯೇ ಎಂಬುದನ್ನೂ ವರದಿಯಲ್ಲಿ ಉಲ್ಲೇಖಿಸಬೇಕು ಎಂದು ನ್ಯಾಯಲಯ ಸೂಚಿಸಿದೆ.

ಈಗಾಗಲೇ ನ್ಯಾಯಾಲಯದ ಆದೇಶದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದರು. ಆದರೆ ದರ್ಶನ್ ಪರ ವಕೀಲರು ಈ ಮಾಹಿತಿಯನ್ನು ನಿರಾಕರಿಸಿ ಯಾವುದೇ ಸೌಲಭ್ಯ ನೀಡಿಲ್ಲ ಹಾಗೂ ದೈಹಿಕ  ಹಿಂಸೆ ನೀಡಲಾಗುತ್ತಿದೆ ಎಂದು ವಾದಿಸಿದರು.

More articles

Latest article