ನಾನು ಸಿಎಂ ಆಗುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿಯೇ ಇಲ್ಲ; ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ

Most read

ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ನಗರದ ಲಾಲ್‌ಬಾಗ್‌ ಉದ್ಯಾನವನದಲ್ಲಿ ಇಂದು  ಬೆಂಗಳೂರು ನಡಿಗೆಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ನಂತರ ಅವರು ಮಾತನಾಡಿದರು.

ಲಾಲ್‌ ಬಾಗ್ ನಲ್ಲಿ ಸಾರ್ವಜನಿಕರು ನನ್ನನ್ನು ಭೇಟಿ ಮಾಡಿದಾಗ ಕೆಲವರು ನೀವು ಮುಖ್ಯಮಂತ್ರಿ ಯಾವಾಗ ಆಗುತ್ತೀರಿ ಎಂದು ಪ್ರಶ್ನಿಸಿದರು. ಆದರೆ ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಮಾಧ್ಯಮಗಳು ಶಿವಕುಮಾರ್‌ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿದ್ದಾರೆ ಎಂದು ಪ್ರಸಾರ ಮಾಡುತ್ತಿವೆ. ಇದರಿಂದ ನನಗೆ ನೋವುಂಟಾಗಿದೆ ಎಂದರು.

ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಆತುರ ನನಗಿಲ್ಲ. ಸಾರ್ವಜನಿಕರ ಸೇವೆಗೆ ಅವಕಾಶ ಸಿಕ್ಕಿದೆ. ಜನರಿಗಾಗಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇನೆ. ಒಂದು ವೇಳೆ ಇದೇ ರೀತಿ ಅಪಪ್ರಚಾರ ಮುಂದುವರಿಸಿದರೆ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ನನ್ನ ಹೇಳಿಕೆಯನ್ನು ತಿರುಚಿ ಪರಸಾರ ಮಾಡುತ್ತಿದ್ದರೆ ಮಾಧ್ಯಮಗಳನ್ನು ನನ್ನ ಕಾರ್ಯಕ್ರಮ ಮತ್ತು ಸುದ್ದಿಗೋಷ್ಠಿಗಳಿಗೆ ಆಹ್ವಾನಿಸುವುದೇ ಇಲ್ಲ ಎಂದೂ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿಯಾಗಿದೆ. ಜನಸೇವೆಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹಗಲಿರುಳೂ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.

More articles

Latest article