ಗಡಿಪಾರು ಆದೇಶಕ್ಕೆ ತಡೆ; ಬೀಸುವ ದೊಣ್ಣೆಯಿಂದ ಪಾರಾದ ಸೌಜನ್ಯ ಪರ ಹೋರಾಟಗಾರ ತಿಮರೋಡಿ

Most read

ಬೆಂಗಳೂರು: ಗಡಿಪಾರು ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಗಡಿಪಾರು ಆದೇಶವನ್ನು ಜಾರಿಗೊಳಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದ ಮಹೇಶ್ ಶೆಟ್ಟಿ ತಿಮರೋಡಿ ಬೀಸುವ ದೊಣ್ಣೆಯಿಂದ ತಾತ್ಕಾಲಿಕವಾಗಿ ಪಾರಾಗಿದ್ದಾರೆ.

 ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್‌ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಇದರ ವಿಚಾರಣೆ ನಡೆಸಿದರು.

ಧರ್ಮಸ್ಥಳದ ಗ್ರಾಮದ ಹತ್ಯೆಗಳು ಮತ್ತು ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಂಗಳೂರಿನಿಂದ ಒಂದು ವರ್ಷ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಆದರೆ ಗಡಿಪಾರು ಮಾಡಿ ಆದೇಶ ಜಾರಿಯಾಗಿಲ್ಲ ಗಡಿಪಾರು ನೋಟಿಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೇ ನೀಡಬೇಕು. ಆದರೆ, ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಹೊರಡಿಸಿದ ದಿನದಿಂದಲೂ ಕಾಣೆಯಾಗಿದ್ದಾರೆ.

More articles

Latest article