ಬೆಂಗಳೂರು: SSLC ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಗುಡ್ ನ್ಯೂಸ್! ಇನ್ನು ಮುಂದೆ ಎಸ್‌ಎಸ್‌ಎಲ್
ಸಿ ಪರೀಕ್ಷೆಯಲ್ಲಿ ಶೇ.33ರಷ್ಟು ಅಂಕ ಗಳಿಸಿದರೆ ಉತ್ತೀರ್ಣರಾಗಬಹುದು.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿವರ ನೀಡಿದರು.
ಈ ನಿಯಮ ಈ ವರ್ಷದಿಂದಲೇ (2025-26) ಜಾರಿಗೆ ಬರಲಿದ್ದು ಸರ್ಕಾರಿ ಖಾಸಗಿ ಶಾಲೆ ಎರಡಕ್ಕೂ ಅನ್ವಯವಾಗಲಿದೆ. 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ.33 ಅಂಕ ಪಡೆದರೆ ಮುಂದಿನ ಶಿಕ್ಷಣಕ್ಕೆ ಹೋಗಬಹುದು ಎಂದರು.
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ರೀತಿಯ ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲಿ ಎಂದು ವೆಬ್ ಕ್ಯಾಸ್ಟ್ ಮಾಡಲಾಗಿತ್ತು. ಹೀಗಾಗಿ ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದಾಗಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಪರೀಕ್ಷೆಗೆ ಅಣಿಗೊಳಿಸಿದರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಶಾಲಾ ವಿದ್ಯಾರ್ಥಿಗಳಿಗೆ 5 ಕಿಮೀವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದೂ ತಿಳಿಸಿದರು.