ಬೆಂಗಳೂರಿನಲ್ಲಿ ಸಂಜೆ ವೇಳೆ ಜಾತಿಗಣತಿಗೆ ನಿರ್ಧಾರ; ಮಾಹಿತಿ ನೀಡಲು ಇನ್‌ ಫೋಸಿಸ್‌ ಸುಧಾ ಮೂರ್ತಿ ನಕಾರ

Most read

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಲು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ನಿರಾಕರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ವಯಂ ಘೋಷಣೆ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 10 ರಂದು ಗಣತಿದಾರರು ಜಯನಗರದಲ್ಲಿರುವ ಸುಧಾ ಮೂರ್ತಿ ಅವರ ಮನೆಗೆ ಭೇಟಿ ನೀಡಿದ್ದರು. ನಾವು ಹಿಂದುಳಿದ ವಿಭಾಗಕ್ಕೆ ಸೇರಿದವರಲ್ಲ. ಆದ್ದರಿಂದ ಜಾತಿ ಗಣತಿ ಸಮೀಕ್ಷೆಗೆ ಮಾಹಿತಿ ನೀಡುವುದರಿಂದ ಸರ್ಕಾರಕ್ಕೆ ಯಾವುದೇ  ಪ್ರಯೋಜನ ಆಗುವುದಿಲ್ಲ ಎಂದು ಘೋಷಣಾ ಪತ್ರದಲ್ಲಿ ಬರೆದಿದ್ದಾರೆ.

ಬೆಂಗಳೂರಿನಲ್ಲಿ ಸಂಜೆ ವೇಳೆ ಗಣತಿ ನಡೆಸಲು ನಿರ್ಧಾರ:

ಬೆಂಗಳೂರಿನಲ್ಲಿ ಸಂಜೆ ವೇಳೆ ಜಾತಿ ಜನಗಣತಿ ನಡೆಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಈ ಸಂಬಂಧ ಮಾಹಿತಿ ನೀಡಿದ್ದು, ಹಗಲಿನಲ್ಲಿ ಸಮೀಕ್ಷೆಗೆ ಹೋದಾಗ ಮನೆಗಳಲ್ಲಿ ಯಾರೊಬ್ಬರೂ ಇರುತ್ತಿರಲಿಲ್ಲ. ಆದ್ದರಿಂದ ಸಂಜೆ ವೇಳೆ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ಮೂರು ನಾಲ್ಕು ದಿನ  ರಾತ್ರಿ ವೇಳೆ ಸಮೀಕ್ಷೆ ಮಾಡಲಾಗುತ್ತದೆ. ಸಮೀಕ್ಷೆಯಿಂದ  ಮಹಿಳಾ ಗಣತಿದಾರರಿಗೆ ವಿನಾಯಿತಿ ನೀಡಲಾಗುತ್ತದೆ. ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸದ್ಯ ಶೇ. 81ರಷ್ಟು ಮನೆಗಳ ಸಮೀಕ್ಷೆ ಮುಗಿದಿದೆ. ಸಮೀಕ್ಷೆಯಲ್ಲಿ ಎಷ್ಟು ಮಂದಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಿಲ್ಲ. ಸಮೀಕ್ಷೆ ಅವಧಿ ವಿಸ್ತರಣೆ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

More articles

Latest article