ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು RSS ನಡುವಿನ ಸಮರ ತಾರಕಕಕೇರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಯುತಿರಲುತ್ತಲೇ ಇದೆ.
ಇದೀಗ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿನಲ್ಲಿ ಪೋಸ್ಟರ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪೋಸ್ಟರ್ ಅನ್ನು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ RSS ಕ್ಷಮೆ ಕೇಳಿದಂತೆ ಸೃಷ್ಟಿಸಲಾಗಿದೆ. ಅಂದು ರಾಜಕಾರರಿಂದ ನಮ್ಮ ಕುಟುಂಬವನ್ನು ರಕ್ಷಿಸಿದ್ದೇ ಸಂಘ ಪರಿವಾರ. ಅದರ ಋಣ ನಮ್ಮ ಮೇಲಿದೆ ಎಂದು ಹೇಳಲಾಗಿದೆ.
ಆದರೆ ಈ ಪೋಸ್ಟರ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ಇದೊಂದು ನಕಲಿ ಪೋಸ್ಟರ್. ಇದನ್ನೂ RSS ಸೃಷ್ಟಿಸಿದೆ ಎಂದು ಕಿಡಿ ಕಾರಿದ್ದಾರೆ.
ಸತ್ಯಮಾರ್ಗದಲ್ಲಿ ಗೆಲ್ಲಲು ಸಾಧ್ಯವಾಗದಿದ್ದಾಗ ಸುಳ್ಳಿನ ಮಾರ್ಗದಲ್ಲಾದರೂ ಗೆಲ್ಲಬೇಕು ಎನ್ನುವುದು ಸಂಘನೀತಿ! ಸುಳ್ಳಿನ ಗೋಪುರ ಕಟ್ಟಿ ತಮ್ಮ ಕರಾಳ ಇತಿಹಾಸಕ್ಕೆ ಸಚ್ಚಾರಿತ್ರ್ಯದ ಬಣ್ಣ ಲೇಪಿಸಲು ಪ್ರಯತ್ನಿಸುವ ಸಂಘಪರಿವಾರವು ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಇತಿಹಾಸವನ್ನೂ ಕೆಡಿಸಲು ಮುಂದಾಗುವ ಮೂಲಕ ತಮ್ಮ ಹತಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಸಂಘಪಾರಿವಾರ ಮೊದಲಿನಿಂದಲೂ ಇಂತಹ ಕುತಂತ್ರ, ಕುಕೃತ್ಯ, ಕುಯುಕ್ತಿಗಳನ್ನು ಮಾಡಿದ ಕುಖ್ಯಾತಿಯನ್ನು ಹೊಂದಿದೆ. ಈ ಕೃತ್ಯಕ್ಕೆ ಕಾನೂನಿನ ಮೂಲಕವೇ ಉತ್ತರ ನೀಡಲಾಗುವುದು ಎಂದು ಕಾನೂನು ಸಮರ ನಡೆಸುವುದಾಗಿ ಘೋಷಿಸಿದ್ದಾರೆ.