ಮಹಿಳೆಯೊಬ್ಬರ ದೂರಿನ ಮೇರೆಗೆ ಬೆಂಗಳೂರಿನ ಪೊಲೀಸರು ಭಾರತೀಯ ಹಾಕಿ ಆಟಗಾರನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸರು ಆರೋಪಿ ಆಟಗಾರನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್, ಸಮಾಜಿಕ ಜಾಲತಾಣ ಮೂಲಕ ಸಂತ್ರಸ್ತೆಗೆ ಪರಿಚಯವಾಗಿದ್ದಾರೆ. ಯುವತಿಗೆ 16 ವರ್ಷವಿದ್ದಾಗ ಪ್ರೀತಿ ಮಾಡಿದ್ದ. ಜೊತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ ಎಂದು ಆರೋಪಿಸಿದ್ದಾರೆ.
ಇದಲ್ಲದೇ 2019ರಿಂದ ಯುವತಿ ಜೊತೆಗೆ ಸಂಪರ್ಕದಲ್ಲಿದ್ದು, ಈಗ ಮದುವೆಯಾಗದೇ ವಂಚಿಸಿರುವ ಹಿನ್ನೆಲೆ, ಆರೋಪಿಯ ಮೇಲೆ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆ ಈ ಹಿಂದೆ ಪೊಲೀಸರನ್ನು ಸಂಪರ್ಕಿಸಿದ್ದರೂ, ಆರೋಪಿಯು ಭಾರತೀಯ ಹಾಕಿ ತಂಡವನ್ನು ಪ್ರತಿನಿಧಿಸುತ್ತಿದ್ದರಿಂದ ಅವರು ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದೆ ರಾಜಿ ಮಾಡಿಕೊಳ್ಳಲು ಸಮಯ ನೀಡಿದ್ದಾರೆ. ಆರೋಪಿಯು ತನ್ನ ಮಾತನ್ನು ಉಳಿಸಿಕೊಳ್ಳದ ಕಾರಣ, ಪೊಲೀಸರು ಅಂತಿಮವಾಗಿ ಆತನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರುಣ್ ಕುಮಾರ್ ಮೂಲತಃ ಹಿಮಾಚಲ ಪ್ರದೇಶ ಮೂಲದವನಾಗಿದ್ದು,ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿದ್ದಾಗ ಈ ಅಪರಾಧ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.