ಬೆಂಗಳೂರು: ನಿಂತಿದ್ದ ಕಾರಿಗೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸುಧೀಂದ್ರ ಮೃತಪಟ್ಟಿರುವ ದುರಂತ ಘಟನೆ ಬೆಂಗಳೂರು –ತುಮಕೂರು ರಸ್ತೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ.
ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಡ್ಯಾನ್ಸರ್ ಸುಧೀಂದ್ರ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ. ಸುಧೀಂದ್ರ ಅವರು ನಿನ್ನೆಯಷ್ಟೇ ಮಾರುತಿ ಸುಜುಕಿ ಕಂಪನಿಯ ಎಕೋ ಕಾರನ್ನು ಖರೀದಿಸಿದ್ದರು. ಆದರೆ ಇಂದು ರಸ್ತೆ ಮಧ್ಯೆ ಕಾರು ಕೆಟ್ಟು ನಿಂತಿದ್ದರಿಂದ ಪರೀಕ್ಷಿಸಲು ಕಾರಿನಿಂದ ಕೆಳಗಿಳಿದಿದ್ದರು. ಆಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಧೀಂದ್ರ ಅವರು, ವಿವಿಧ ಚಾನೆಲ್ ಗಳ ಡ್ಯಾನ್ಸ್ ಶೋ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ದಾಬಸ್ ಪೇಟೆಯಲ್ಲಿ ಡ್ಯಾನ್ಸ್ ತರಬೇತಿ ನೀಡುತ್ತಾ ಹಲವು ಪ್ರತಿಭೆಗಳ ಹುಟ್ಟಿಗೆ ಕಾರಣರಾಗಿದ್ದರು.
ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

