ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್!‌  ಮುಂದಿನ ವರ್ಷದಿಂದ ಗೌರವಧನ ರೂ.1 ಸಾವಿರ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Most read

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಂಬರುವ ಬಜೆಟ್‌ ನಲ್ಲಿ ಮತ್ತೆ ರೂ.1 ಸಾವಿರ ಹೆಚ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ‌ ತಿಳಿಸಿದ್ದಾರೆ.

ತುಮಕೂರಿನಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2025ರ ಬಜೆಟ್‌ನಲ್ಲಿ ರೂ.1 ಸಾವಿರ ಗೌರವ ಧನ ಹೆಚ್ಚಿಸಲಾಗಿತ್ತು. 2026ರ ನ ಬಜೆಟ್‌ನಲ್ಲೂ ಮತ್ತೆ ರೂ.1 ಸಾವಿರ ಹೆಚ್ಚಿಸಲಾಗುತ್ತದೆ. ಗೌರವ ಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಲ್ಲಿ ಶೇ. 70ರಷ್ಟು ಮಂದಿ ಗೃಹಲಕ್ಷ್ಮಿ  ಯೋಜನೆಗಳಿಂದ ಸಹಾಯ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಸಹಕಾರ ಬ್ಯಾಂಕ್‌ನಲ್ಲಿ ರೂ.30 ಸಾವಿರದಿಂದ ರೂ.5 ಲಕ್ಷದ ವರೆಗೆ ಸಾಲ ವಿತರಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇದ್ದು, ಆದಷ್ಟು ಶೀಘ್ರವಾಗಿ ಫಲಾನುಭವಿಗಳಿಗೆ  ಬಿಡುಗಡೆ ಮಾಡಲಾಗುವುದು. ಈ ಯೋಜನೆಗಾಗಿ ಮಾಸಿಕ ರೂ.2,500 ಕೋಟಿ ಬೇಕಾಗುತ್ತದೆ. ನವಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಕ್ಕ ಪಡೆ, ಸಹಕಾರ ಬ್ಯಾಂಕ್‌‌ ಗೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ಸಚಿವೆ ಹೆಬ್ಬಳಕರ ತಿಳಿಸಿದರು.

More articles

Latest article