ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನಾಚರಣೆ

Most read

ಬೆಂಗಳೂರು: ಪ್ರದೇಶ ಕಾಂಗ್ರೆಸ್‌ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನಾಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದೇ ಸಂದರ್ಭದಲ್ಲಿ, ಅವರು ಇಂದಿರಾ ಗಾಂಧಿ ಅವರ ಆಯ್ದ ನುಡಿಮುತ್ತುಗಳನ್ನು ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬರೆದಿರುವ ಪುಸ್ತಕದ ಕನ್ನಡ ಅನುವಾದದ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

ಹಿರಿಯ ನಾಯಕಿ, ಲೇಖಕಿ ಬಿ ಟಿ ಲಲಿತಾ ನಾಯಕ್, ವಾಸಂತಿ ಶಿವಣ್ಣ, ಮುಮ್ತಾಜ್ ಬೇಗಂ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ, ಬೆಂಗಳೂರು ಜಿಲ್ಲಾ ಸಮಿತಿಯ ಕಾಂಗ್ರೆಸ್ ಅಧ್ಯಕ್ಷರು, ಮತ್ತಿತರರು ಭಾಗವಹಿಸಿದ್ದರು.

More articles

Latest article