ಮುಖ್ಯಮಂತ್ರಿ ಬದಲಾವಣೆ: ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ನಿರ್ಧಾರ ಹೈಕಮಾಂಡ್‌ ಗೆ ಬಿಟ್ಟ ವಿಚಾರ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದ್ದಾರೆ.

ಶಿಡ್ಲಘಟ್ಟದಲ್ಲಿ ಸಿದ್ದರಾಮಯ್ಯ ಹೈಟೆಕ್ ರೇಷ್ಮೆ ಮಾರುಕಟ್ಟೆ ಉದ್ಘಾಟನೆ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವುಕ್ಕೂ ಮುನ್ನ ಅವರು ಸುದ್ದಿಗಾರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಮಾತ್ರ ಹೈಕಮಂಡ್‌ ಜತೆ ಚರ್ಚೆ ನಡೆಸುತ್ತಿದ್ದೇನೆ. ಇದು ನಾಯಕತ್ವ ಬದಲಾವಣೆಯ ವಿಚಾರವಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಆದರೆ ನಾವು ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಕೈಗೊಳ್ಳುತ್ತಿದ್ದೇವೆ ಎಂದರು. ಶಿಡ್ಲಘಘಟ್ಟ ಶಾಸಕರು ಜೆಡಿಎಸ್‌ ನವರೇ ಆಗಿದ್ದರೂ ಅವರು ಸಹಕಾರ ನೀಡುತ್ತಿದ್ದಾರೆ. ಆದ್ದರಿಂದಲೇ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

More articles

Latest article