ಅಂಧ ಮಹಿಳಾ ಕ್ರಿಕೆಟ್ ತಂಡ: ರಾಜ್ಯದ ಪಟುಗಳಿಗೆ ನಗದು ಮತ್ತು ಸರ್ಕಾರಿ ಉದ್ಯೋಗ: ಸಿ.ಎಂ ಸಿದ್ದರಾಮಯ್ಯ ಘೋಷಣೆ

Most read

 ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂದಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.  ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ  ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ಆಟಗಾರ್ತಿಯರಿಗೆ ಶುಭ ಹಾರೈಸಿದರು.

More articles

Latest article