ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಸಂತಾಪ

Most read

ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್‌ ಸದಸ್ಯರಾಗಿ  ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಎಕ ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು, ಶಾಸಕರು ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯ  ಅವರು ತಮ್ಮ ಸಂತಾಪದಲ್ಲಿ ದೇವರಾಜ್‌ ಅವರ ಕೊಡುಗೆಯನ್ನು ಸ್ಮರಿಸಿ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದಿದ್ದಾರೆ.

ಜನ್ಮದಿನದಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ.  ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಶಿವಕುಮಾರ್‌ ಅವರು ತಮ್ಮ ಸಂತಾಪದಲ್ಲಿ ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

More articles

Latest article