ನವದೆಹಲಿ: ದೇಶದಲ್ಲಿ ಬಳಕೆ ಮಾಡುತ್ತಿರುವ ಎಲ್ಲ ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ‘ ಆ್ಯಪ್ ಕಡ್ಡಾಯ ಅಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಎಲ್ಲ ಮೊಬೈಲ್ ಗಳಲ್ಲಿ ಸಂಚಾರ ಸಾಥಿ ಆ್ಯಪ್ ಅನ್ನು ಫ್ರೀ ಇನ್ ಸ್ಟಾಲ್ ಮಾಡುವುದರಿಂದ ಖಾಸಗಿತನಕ್ಕೆ ಧಕ್ಕೆ ಉಂಟಾಗುತ್ತದೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲೇ ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ ಈ ಸ್ಪಷ್ಟನೆ ನೀಡಿದ್ದಾರೆ.
ಮೊಬೈಲ್ ಬಳಕೆದಾರರು ತಮ್ಮ ಮೊಬೈಲ್ ಅನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಸಂಚಾರ ಸಾಥಿ ಆ್ಯಪ್ ಜಾರಿಗೊಳಿಸಲಾಗಿದೆ. ಮೋಸ, ವಂಚನೆ ಮತ್ತು ಮೊಬೈಲ್ ಕಳ್ಳತನದಿಂದ ಬಳಕೆದಾರರಿಗೆ ರಕ್ಷಣೆ ನೀಡಲು ಈ ಆ್ಯಪ್ ಅನ್ನು ಜಾರಿಗೊಳಿಸಸಲಾಗಿದೆಯೇ ಹೊರತು ಸರ್ಕಾರ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ.
‘ಈ ಆ್ಯಪ್ ಅನ್ನು ಎಲ್ಲರಿಗೂ ಪರಿಚಯಿಸುವುದು ನಮ್ಮ ಕರ್ತವ್ಯವಾಗಿತ್ತು. ಆದರೆ ಅದನ್ನು ಅವರ ಮೊಬೈಲ್ ಗಳಲ್ಲಿ ಇಟ್ಟುಕೊಳ್ಳಬೇಕೋ ಬೇಡವೋ ಎನ್ನುವುದು ಬಳಕೆದಾರರಿಗೆ ಬಿಟ್ಟ ಸಂಗತಿ ಎಂದು ತಿಳಿಸಿದ್ದಾರೆ. ವಿರೋಧ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಖಂಡಿಸಿ ದೇಶದ ನಾಗರಿಕರ ಮೇಲೆ ನಿರಂತರ ಕಣ್ಗಾವಲು ಇಡಲು ಇದನ್ನು ಪರಿಚಯಿಸಲಾಗುತ್ತಿದೆ ಎಂದು ಆಪಾದಿಸಿದ್ದವು.

