ಎಐಸಿಸಿ ಪ್ರ. ಕಾ. ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Most read

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅನ್ನಲು ಸಾಧ್ಯವಿಲ್ಲ ಎಂದರು. ನೀವು ದೆಹಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

ಅವರು ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿಯಲ್ಲಿ ಆಯೋಜಿಸಲಾಗಿದ್ದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ್ದರು.

More articles

Latest article