ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬುಧವಾರ ತಡರಾತ್ರಿ ಈ ಅಪಘಾತ ನಡೆದಿದೆ. ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಟ್ರಕ್ ಅಡಿ ಸೇರಿಕೊಂಡಿದೆ ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮೃತರು ವೆಂಕಟೇಶ್ವರ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ತಲುಪಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

