ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಪಿಎಂ ಮೋದಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

Most read

ಬೆಂಗಳೂರು: ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$  = 90.21 INC. ಇದೇ ಮೊದಲ ಬಾರಿಗೆ ಇಂಟರ್‌ ನ್ಯಾಷನಲ್ ಮಾನಿಟರಿ ಫಂಡ್ (ಐಎಂಎಫ್)‌ ಭಾರತದ ಜಿಡಿಪಿ ಅಂಕಿಅಂಶಗಳಿಗೆ C ಗ್ರೇಡ್ ನೀಡಿದೆ. ಕೇಂದ್ರ ಸರ್ಕಾರವೇ ನೀಡಿದ ಮಾಹಿತಿಯಂತೆ ಕಳೆದ 5 ವರ್ಷಗಳಲ್ಲಿ 2 ಲಕ್ಷ ಕಂಪನಿಗಳು ಬಾಗಿಲು ಮುಚ್ಚಿವೆ, ಮತ್ತು ಕೇಂದ್ರ ಸರ್ಕಾರದ ಬಳಿ ಉದ್ಯೋಗ ಕಳೆದುಕೊಂಡವರ ಭದ್ರತೆಗೆ ಯಾವುದೇ ಯೋಜನೆಗಳು ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿರುವ ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ.

 ಅಂತರರಾಷ್ಟ್ರೀಯ ಪಾಸ್ಪೋರ್ಟ್ ಸೂಚ್ಯಂಕದಲ್ಲಿ ಭಾರತದ ಪಾಸ್ಪೋರ್ಟ್ ಪಾತಾಳಕ್ಕೆ ಕುಸಿದಿದೆ. @BJP4Karnataka ಈ ವೈಫಲ್ಯಗಳನ್ನು “ಮೋದಿಜಿಯ ಮಾಸ್ಟರ್ ಸ್ಟ್ರೋಕ್” ಎಂದು ಆಚರಿಸಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

More articles

Latest article