ಬೆಳಗಾವಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡರೂ ಮೆಕ್ಕೆ ಜೋಳ ಖರೀದಿಗೆ ಒಪ್ಪಿಗೆ ಕೊಡಲಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಆಪಾದಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗೆ ಈಗಾಗಲೇ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಈ ಬಾರಿ ಸುಮಾರು 60 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಬೆಳೆದಿಯಲಾಗಿದೆ. ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು.
ಎಥೆನಾಲ್ ಪೌಲ್ಟ್ರಿಗೂ ಖರೀದಿ ಮಾಡುವಂತೆ ಸೂಚನೆ ನೀಡಲಾಗಿದೆ. ಇದರ ಸಾಗಣೆ ವೆಚ್ಚವನ್ನು ಬರಿಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದರು.

