Wednesday, December 10, 2025

ರಾಜ್ಯದ ಸಮಸ್ಯೆಗಳನ್ನು ಕುರಿತು ಬಿಜೆಪಿ ಸಂಸದರು ತುಟಿ ಬಿಚ್ಚುತ್ತಿಲ್ಲ:ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪ

Most read

ಬೆಂಗಳೂರು: ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳನ್ನು ಕುರಿತು ರಾಜ್ಯದ ಬಿಜೆಪಿ ಸಂಸದರು ಇದುವರೆಗೂ ಧ್ವನಿ ಎತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಪಾದಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರದ ಜವಬ್ದಾರಿ ಏನು ಎಂದು ಅವರು ಪ್ರಶ್ನಿಸಿದರು

ಬೆಲೆ ನಿಗದಿ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೂ, ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯ ಸರ್ಕಾರ ಪರಿಹಾರ ನೀಡುತ್ತದೆ. ಇದಕ್ಕೆ ಕೇಂದ್ರವೂ ಕೈಜೋಡಿಸಬೇಕಲ್ಲವೇ ಎಂದರು. ಬೊಮ್ಮಾಯಿ ಸೇರಿದಂತೆ ಯಾವುದೇ ಬಿಜೆಪಿ ಸಂಸದ ಸಂಸತ್ತಿನಲ್ಲಿ ಈ ವಿಚಾರವಾಗಿ ಮಾತನಾಡುತ್ತಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಪ್ರಧಾನಿ ಮೋದಿ ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡುವ ಆಸಕ್ತಿಯೂ ಇಲ್ಲ ಎಂದು ಟೀಕಿಸಿದರು.

More articles

Latest article