79ನೇ ವರ್ಷಕ್ಕೆ ಕಾಲಿಟ್ಟ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ಸಿಎಂ, ಡಿಸಿಎಂ ಸೇರಿ ಗಣ್ಯರ ಶುಭಾಶಯ

Most read

ನವದೆಹಲಿ: ಕಾಂಗ್ರೆಸ್ ಸಂಸದೀಯ ಮಂಡಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 79ನೇ ಹುಟ್ಟು ಹಬ್ಬಕ್ಕೆ ಪಕ್ಷದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಶುಭ ಹಾರೈಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕಾಂಗ್ರೆಸ್ ಪಕ್ಷದ ವರಿಷ್ಠರು, ನಮ್ಮೆಲ್ಲರ ಮಾರ್ಗದರ್ಶಕರು ಆದ ಸೋನಿಯಾ ಗಾಂಧಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಎಕ್ಸ್‌ ನಲ್ಲಿ ಅವರು ನಮ್ಮ ನಿರಂತರ ಬೆಂಬಲದ ಆಧಾರಸ್ತಂಭ ಎಂದು ಸೋನಿಯಾ ಗಾಂಧಿ ಅವರನ್ನು ಬಣ್ಣಿಸಿದ್ದಾರೆ.  ನಿಮ್ಮ ನಿಸ್ವಾರ್ಥ ಸೇವೆ ಹಾಗೂ ದೂರದೃಷ್ಟಿಯು ಕಾಂಗ್ರೆಸ್ ಪಕ್ಷವನ್ನು ರೂಪಿಸಿದ್ದು, ಜನರಿಗೆ ಸೇವೆ ಸಲ್ಲಿಸು ನಮ್ಮ ಸಂಕಲ್ಪವನ್ನು ದೃಢಪಡಿಸಿದೆ. ನಮಗೆ ನೀವು ತೋರಿರುವ ಮಾರ್ಗದರ್ಶನ ಹಾಗೂ ನಂಬಿಕೆಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಂದೇಶದಲ್ಲಿ ಶೋಷಿತರ ಪರವಾಗಿ ಸದಾ ಹೋರಾಟದಲ್ಲಿ ಮುಂಚೂಣಿಯಲ್ಲಿರುವ, ನಿಸ್ವಾರ್ಥದಿಂದ ಸವಾಲುಗಳನ್ನು ಎದುರಿಸುತ್ತಾ ಬಂದಿರುವ ಸೋನಿಯಾ ಗಾಂಧಿ ಅವರಿಗೆ ಆರೋಗ್ಯಕರ ಜೀವನ ಲಭಿಸಲಿ ಎಂದು ಕೋರಿದ್ದಾರೆ.

More articles

Latest article