ಬೆಳಗಾವಿ: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಮೂಲಕ ಅವರು ತಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಗೆ ತಕ್ಕ ಅಂಕಿಅಂಶಗಳ ಸಹಿತ ಎದಿರೇಟು ನೀಡಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಅವರು ಉತ್ತರ ನೀಡಿದರು.
ವಿರೋಧ ಪಕ್ಷದ ನಾಯಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಘೋಷಣೆ ಮಾಡಿದ ದಿನದಿಂದ ಇಂದಿನವರೆಗೆ ಟೀಕಿಸುತ್ತಲೇ ಬರುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲವಾಗಿ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನಕ್ಕೆ ಏರಿದೆ ಎಂದೂ ಸದನದ ಗಮನಕ್ಕೆ ತಂದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ 300 ಕೆಪಿಎಸ್ ಶಾಲೆಗಳು:
1800 ಕೋಟಿ ಈ ವರ್ಷ ವೆಚ್ಚವಾಗಿದೆ ಈ ವರ್ಷ 5000 ಕೋಟಿ ವೆಚ್ಚವಾಗಲೇಬೇಕು ಎಂದು ಸೂಚಿಸಲಾಗಿದೆ. ಇಷ್ಟೆಲ್ಲಾ ವೆಚ್ಚಾಡಿದರೂ ಶಿಕ್ಷಣ, ಪೌಷ್ಟಿಕತೆ, ಆರೋಗ್ಯದ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡಬೇಕು ಎಂದು ಸೂಚಿಸಿ ಪ್ರೊ.ಛಾಯಾ ದೇವಡಗಾಂವಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಇವರು ವರದಿಯನ್ನು ಸಲ್ಲಿಸಿದ್ದು, ಸರ್ಕಾರ ಪರಿಶೀಲಿಸಿ ಜಾರಿಗೆ ತರಲಾಗುವುದು. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಕ್ಷರತೆ ಸುಧಾರಣೆಯಾಗಲಿದೆ ಎಂದರು.
ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿದ್ದು, ಹೆಚ್ಚು ಆಸ್ಪತ್ರೆಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. 371 ಜೆ ಜಾರಿಯಾದ ಮೇಲೆ 10000 ವೈದ್ಯಕೀಯ 8000 ಇಂಜಿನಿಯರಿಂಗ್ 12000 ಡೆಂಟಲ್ ಮತ್ತಿತರ ಕೋರ್ಸುಗಳಿಗೆ ಸೇರಿದ್ದಾರೆ. 80% ಭರ್ತಿ ಪ್ರಕ್ರಿಯೆ ಸ್ಥಳೀಯವಾಗಿಯೇ ಆಗಬೇಕೆಂದು ಸೂಚಿಸಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಏನೆಲ್ಲಾ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತಿದ್ದೇವೆ. ರಾಜ್ಯದಲ್ಲಿ 900 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಈ ಭಾಗದ ಅಭಿವೃದ್ಧಿಗೆ 300 ಕೆಪಿಎಸ್ ಶಾಲೆಗಳನ್ನು ತೆರೆಯಲು ಸೂಚಿಸಿದೆ ಎಂದು ತಿಳಿಸಿದರು.
ಎಲ್ಲಾ ಜಿಲ್ಲೆಗಳೂ ಸಮಾನವಾಗಿ ಅಭಿವೃದ್ಧಿಯಾದಾಗ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ. ಜಾತಿ ವ್ಯವಸ್ಥೆ ಇರುವುದರಿಂದ ಎಲ್ಲರಿಗೂ ಸಮಾನ ಅವಕಾಶಗಳು ಸಿಕ್ಕಿಲ್ಲ. 1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ಮಾಡಿದ ಭಾಷಣದಲ್ಲಿ ಸಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಗದೇ ಹೋದರೆ ರಾಜಕೀಯ ಸ್ವಾತಂತ್ರ್ಯದಿಂದ ಸಮಾನತೆ ಸಾಧ್ಯವಿಲ್ಲ ಎಂದಿದ್ದರು. ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದು, ಅಸಮಾನತೆ ತೊಲಗಿಸದೆ ಹೋದರೆ ಆ ಜನರೇ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡ್ತಾರೆ ಎಂದಿದ್ದರು. ಆ ಕಾರಣಕ್ಕಾಗಿಯೇ ಅನೇಕ ಭಾಗ್ಯಗಳನ್ನು ಮತ್ತು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ಎಲ್ಲ ಧರ್ಮದ, ಪಕ್ಷದ ಬಡವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದಾರೆ. ಕರ್ನಾಟಕ ಇದರಿಂದಾಗಿಯೇ ದೇಶದಲ್ಲಿ ತಲಾ ಆದಾಯದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಚಲನೆಯಿಲ್ಲದ ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ, ಸಾಮಾಜಿಕ ಸಬಲೀಕರಣ ಅಗತ್ಯ. ಆಗ ಮಾತ್ರ ಜಡತ್ವ ಹೋಗಲಾಡಿಸಬಹುದು. ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತೆ 10 ರಿಂದ12% ಇತ್ತು.76% ಸಾಕ್ಷರತೆ ಈಗಿದ್ದರೂ ಜಾತಿ ವ್ಯವಸ್ಥೆ ಹೋಗಿಲ್ಲ. ವೈದ್ಯರೂ ಕೂಡ ಹಣೆಬರಹ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಡುತ್ತಾರೆ.ನಮ್ಮಲ್ಲಿ ಜಾತಿ ವ್ಯವಸ್ಥೆಯ ಕಾರಣದಿಂದ ಗುಲಾಮಗಿರಿಯ ಮನಸ್ಥಿತಿ ಮನೆ ಮಾಡಿಕೊಂಡಿದೆ. ಇದಕ್ಕಾಗಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಸಮರ್ಥಿಸಿಕೊಂಡರು.
ಉತ್ತರ ಕರ್ನಾಟಕ ಹಿಂದುಳಿದಿದೆ ಎಂಬ ಕಾರಣಕ್ಕಾಗಿಯೇ 2001 ರಲ್ಲಿ ಆರ್ಥಿಕ ತಜ್ಞ ಡಾ. ಡಿಎಂ ನಂಜುಂಡಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಅವರು ಒಟ್ಟು 114 ತಾಲ್ಲೂಕುಗಳು ಹಿಂದುಳಿದಿವೆ ಎಂದು ಗುರುತಿಸಿದ್ದರು. 8 ವರ್ಷಗಳಲ್ಲಿ 31000 ಕೋಟಿ ರೂಗಳನ್ನು ಸರ್ಕಾರ ವೆಚ್ಚ ಎಂದು ಶಿಫಾರಸ್ಸು ಮಾಡಿದ್ದರು. ಪ್ರಸ್ತುತ 31000 ಕೋಟಿಗಳಿಗಿಂತ ಹೆಚ್ಚು ವೆಚ್ಚ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೂ. 3000 ಕೋಟಿ ವಿಶೇಷ ಅಭಿವೃದ್ಧಿ ಯೋಜನೆಯಡಿ ವೆಚ್ಚ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಅಸಮತೋಲನ ಎಷ್ಟರ ಮಟ್ಟಿಗೆ ನಿವಾರಣೆಯಾಗಿದೆ. ವರದಿಯ ಪರಿಣಾಮಗಳೇನು , ಇನ್ನೂ ಉತ್ತರ ಕರ್ನಾಟಕ ಹಿಂದುಳಿದಿವೆ. 39 ರಲ್ಲಿ 27 ತಾಲ್ಲೂಕುಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುತ್ತವೆ. 31000 ಕೋಟಿ ವೆಚ್ಚ ಮಾಡಿದರೂ ಪ್ರಾದೇಶಿಕ ಅಸಮತೋಲನ ಇನ್ನೂ ನಿವಾರಣೆಯಾಗಿಲ್ಲ ಎಂದು ಪ್ರಸ್ತಾಪಿಸಲಾಗಿದೆ ಎಂದರು.

