ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ಸಲ್ಲಿಸಿದ್ದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮೊರೆ ಇಟ್ಟಿದ್ದಾರೆ.
ನಿನ್ನೆಯಷ್ಟೇ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದರು.
ತನಗೆ ಹಾಗೂ ತನ್ನ ಪತ್ನಿಗೆ ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ ಎಂಬವರು ಜೀವ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಆದ್ದರಿಂದ ತನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಚಿನ್ನಯ್ಯ ಇದೇ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿರುವ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿಕೊಂಡಿದ್ದು ಕಾನೂನು ರೀತ್ಯಾ ಕ್ರಮ ಜರುಗಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

