ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ ಹಾಗೂ ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್‌ಎಫ್‌ಆರ್) ವಕ್ತಾರರು ತಿಳಿಸಿದ್ದಾರೆ. ಈ ದುರಂತದಲ್ಲಿ ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ವರದಿಗಳು ತಿಳಿಸಿವೆ.
ರೈಲು ಸೈರಾಂಗ್‌ನಿಂದ ನವದೆಹಲಿಗೆ ತೆರಳುತ್ತಿದ್ದಾಗ ಇಂದು ಬೆಳಗಿನ ಜಾವ 2.20 ರ ವೇಳೆಗೆ ಈ ಅಪಘಾತ ಸಂಭವಿಸಿದೆ ಈ ದುರಂತದ ಪರಿಣಾಮ ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿದೆ. ಆದರೆ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಎಂದು ಅವರು ಮಾಹಿತಿ ನೀಡಿದ್ದಾರೆ.
ಹಳಿತಪ್ಪಿದ ಪರಿಣಾಮ ಮತ್ತು ಆನೆಯ ದೇಹದ ಭಾಗಗಳು ಹಳಿಗಳ ಮೇಲೆ ಚದುರಿಹೋಗಿದ್ದ ದೃಶ್ಯಗಳು ಮನಕಲಕುವಂತಿದ್ದವು. ಹಳಿಗಳ ಮೇಲೆ ಆನೆಗಳ ಹಿಂಡನ್ನು ಗಮನಿಸಿದ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದರಾದರೂ ಅಪಘಾತ ತಡೆಯಲು ಸಾಧ್ಯವಾಗಿಲ್ಲ.
ಇದರಿಂದ ಅಸ್ಸಾಂ ಮತ್ತು ಈಶಾನ್ಯದ ಇತರ ಭಾಗಗಳಿಗೆ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಜಮುನಾಮುಖ್-ಕಂಪುರ ವಿಭಾಗದ ಮೂಲಕ ಸಂಚರಿಸಬೇಕಿದ್ದ ರೈಲುಗಳು ಉತ್ತರಪ್ರದೇಶದ ಮೂಲಕ ಸಾಗುತ್ತಿವೆ.
2020-21 to 2024-25 ರ ಐದು ವರ್ಷಗಳ ಅವಧಿಯಲ್ಲಿ 79 ಆನೆಗಳು ಅಪಘಾತದಿಂದ ಮೃತಪಟ್ಟಿವೆ ಎಂದು ಇತ್ತೀಚೆಗಷ್ಟೇ ಸಂಸತ್ ಕಲಾಪದಲ್ಲಿ ಉತ್ತರ ನೀಡಲಾಗಿತ್ತು.

