ಇಡಿ ಪ್ರಕರಣ: ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು: ಹೊಸ ವರ್ಷದ ಗಿಫ್ಟ್‌ ಪಡೆದ ಕಾಂಗ್ರೆಸ್‌ ಶಾಸಕ

Most read

ಬೆಂಗಳೂರು: ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಬೆಟ್ಟಿಂಗ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇ.ಡಿ. ಅಧಿಕಾರಿಗಳು ವೀರೇಂದ್ರ ಪಪ್ಪಿ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ, ಮುಂಬೈ ಸೇರಿದಂತೆ ಪಪ್ಪಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಶೋಧ ನಡೆದಿತ್ತು.

ಆಕ್ರಮ ಹಣ ವರ್ಗಾವಣೆ  ಆರೋಪದಡಿ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕಾಂಗ್ರೆಸ್  ಶಾಸಕರೂ ಆಗಿರುವ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿದೆ.  

ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲ್ಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊ, ಕ್ಯಾಸಿನೊ ಜ್ಯುವೆಲ್​ ಹೀಗೆ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ, ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು, ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಪಡೆದಿರುವ ಕಾರ್ಡ್‌ಗಳನ್ನು ಪಪ್ಪಿ ಹೊಂದಿರುವುದು ದಾಳಿ ವೇಳೆ ಬೆಳಕಿಗೆ ಬಂದಿತ್ತು.

More articles

Latest article