ಬಳ್ಳಾರಿಯ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅವರ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ. ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು. ಹಾಗಾಗಿ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

More articles

Latest article