ನವದೆಹಲಿ: ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ದ ಹರಿಹಾಯ್ದಿದ್ದಾರೆ.
ಫಲಿತಾಂಶ ಕುರಿತು ಟ್ರೀಟ್ ಮಾಡಿರುವ ಅವರು, ನಮ್ಮ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕುಸಿಯುತ್ತಿದೆ. ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ ಎಂದು ಟೀಕಿಸಿದ್ದಾರೆ. ಚುನಾವಣಾ ಆಯೋಗವು ನಾಗರಿಕರನ್ನು ಗೊಂದಲಕ್ಕೀಡುಮಾಡುತ್ತಿದೆ ಎಂದೂ ಹೇಳಿದ್ದಾರೆ.
ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತತ್ತ ದಾಪುಗಾಲು ಹಾಕಿದೆ. ಈ ಮೈತ್ರಿಕೂಟವು 132 ಸ್ಥಾನ ಮತ್ತು ಶಿವಸೇನೆ 71 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ನಾಗ್ಪುರ, ಪುಣೆ ಪಾಲಿಕೆಗಳಲ್ಲೂ ಬಿಜೆಪಿ ಮೈತ್ರಿಕೂಟ ಗೆಲುವಿನತ್ತ ಸಾಗಿದೆ.

