ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ.
ರಾಜ್ಯದಲ್ಲಿ 27,04,166 ರೈತರು ನೋಂದಣಿ ಮಾಡಿಕೊಂಡಿದ್ದು, 11,85,642 ರೈತರು ರೂ. 2094 ಕೋಟಿ ಕ್ಲೇಮ್ ಮಾಡಿದ್ದಾರೆ.
2024 25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ಇವರು ಪ್ರಶಂಸನಾ ಪತ್ರ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ 13ನೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಕಾರ್ಯದರ್ಶಿಗಳು ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಕೃಷಿ ಇಲಾಖೆಯ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು ಪ್ರಶಂಸನಾ ಪತ್ರವನ್ನು ಸ್ವೀಕರಿಸಿದರು.

