ಪೋಕ್ಸೋ ಸಂತ್ರಸ್ತೆ ಹೆಸರು ಬಹಿರಂಗ: ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್

Most read

ಬಳ್ಳಾರಿ: ಇತ್ತೀಚೆಗೆ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್‌ ನೀಡಿದ ದೂರು ಆಧರಿಸಿ ಮಹಿಳಾ ಠಾಣೆ ಪೊಲೀಸರು ಪೊಕ್ಸೊ ಕಾಯ್ದೆಯ ಕಲಂ 23(1) (2) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 74ರ ಅಡಿಯಲ್ಲಿ ಕೇಸು ದಾಖಲಿಸಿದ್ದಾರೆ.

ಬಳ್ಳಾರಿ ನಗರದಲ್ಲಿ ಹೊಸ ವರ್ಷದ ಆರಂಭದ ದಿನದಂದು ಬ್ಯಾನರ್‌ ಕಟ್ಟುವ ವಿಚಾರಕ್ಕೆ ಕೊಲೆ ನಡೆದಿತ್ತು. ಈ ಹತ್ಯೆಯನ್ನು ಖಂಡಿಸಿ ಬಿಜೆಪಿ ಜ. 17ರಂದು ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿತ್ತು. ಈ ಸಮಾವೇಶದಲ್ಲಿ ಶ್ರೀರಾಮುಲು ಅವರು ಪೋಕ್ಸೊ ಸಂತ್ರಸ್ಥೆಯೊಬ್ಬರ ಗುರುತನ್ನು ಬಹಿರಂಗಪಡಿಸಿದರು. ಸ್ಥಳೀಯ ಶಾಸಕ ಭರತ್‌ ರೆಡ್ಡಿ ಯುವ ಜನಾಂಗವನ್ನು ಡ್ರಗ್ಸ್‌ ಕೂಪಕ್ಕೆ ತಳ್ಳುತ್ತಿದ್ದಾರೆ. ನಾಲ್ಕೈದು ವಿದ್ಯಾರ್ಥಿಗಳು ಡ್ರಗ್ಸ್‌ ತೆಗೆದುಕೊಂಡು ನಗರದ ಶಾಲೆಯೊಂದರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಭಾಷಣ ಮಾಡುತ್ತಾ  ವಿದ್ಯಾರ್ಥಿನಿಯ ಹೆಸರು, ಶಾಲೆ, ತರಗತಿ ಮತ್ತು ಜಾತಿಯನ್ನು ಉಲ್ಲೇಖಿಸಿದ್ದರು.

More articles

Latest article