ಬಾದಾಮಿ ಕ್ಷೇತ್ರದ ಅಭಿವೃದ್ಧಿ ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ

Most read

ಬಾದಾಮಿ: 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೆ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಬಾದಾಮಿಯಲ್ಲಿ ಚಾಲುಕ್ಯ ಉತ್ಸವ ನಡೆಯುತ್ತಿರುವ ಬಗ್ಗೆ ಮಾತನಾಡುತ್ತಾ, ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವ ಕಳೆದು ಹತ್ತು ವರ್ಷಗಳಿಂದ ನಡೆದಿರಲಿಲ್ಲ. ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವವನ್ನು ಆಯೋಜಿಸಲಾಗಿದ್ದು, ಸಂತೋಷದಿಂದ ಭಾಗವಹಿಸುತ್ತಿರುವುದು ಮುಖ್ಯಮಂತ್ರಿಗಳು ತಿಳಿಸಿದರು.

ಬಾದಾಮಿಯ ಆಭಿವೃದ್ಧಿ ನಿಶ್ಚಿತ:

ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರೆಸಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಮೇಣದಬಸದಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವರು ಕ್ಲಿಯರೆನ್ಸ್ ನೀಡಿದ್ದು, ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಲ್ಲಿನ ಆಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದರು.

More articles

Latest article