ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೂ ನನ್ನ 1 ವರ್ಷದ ಅವಧಿಯ ಮಹತ್ವದ ಸಾಧನೆ: ಅಮೆರಿಕ ಅಧ್ಯಕ್ಷ ಟ್ರಂಪ್‌

ವಾಷಿಂಗ್ಟನ್: 2025ರಲ್ಲಿ ಭಾರತ- ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದ್ದ ಯುದ್ಧವನ್ನು ನಿಲ್ಲಿಸಿದ್ದಾಗಿ ಟ್ರಂಪ್ ಸುಮಾರು 70ಕ್ಕೂ ಹೆಚ್ಚು ಬಾರಿ ಪ್ರತಿಪಾದಿಸಿದ್ದಾರೆ.

ಎರಡನೇ ಅವಧಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟ್ರಂಪ್ ಒಂದು ವರ್ಷ ಪೂರ್ಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಶ್ವೇತಭವನದಲ್ಲಿ ಸುಮಾರು ಎರಡು ಗಂಟೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿರುವುದನ್ನೂ ಉಲ್ಲೇಖಿಸಿದ್ದಾರೆ.

ಆದರೆ ಭಾರತ ವಿದೇಶಾಂಗ ಸಚಿವಾಲಯ ಪಾಕಿಸ್ತಾನ ಜೊತೆಗಿನ ಸಂಘರ್ಷವನ್ನು ಕೊನೆಗಾಣಿಸುವಲ್ಲಿ ಮೂರನೆಯ ದೇಶದ ಪಾತ್ರವನ್ನು ನಿರಾಕರಿಸುತ್ತಾ ಬಂದಿದೆ. ಟ್ರಂಪ್‌ ಮಾತ್ರ ಭಾರತ- ಪಾಕಿಸ್ತಾನ ಸೇರಿದಂತೆ ಹಲವಾರು ದೇಶಗಳ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್‌ ಶಾಂತಿ ಪುರಸ್ಕಾರ ಲಭಿಸಬೇಕಿತ್ತು ಎಂದು ಅಳಲು ತೋಡಿಕೊಳ್ಳುತ್ತಲೇ ಬಂದಿದ್ದಾರೆ.

ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ಎಂಟು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಪರಮಾಣು ಸಾಮರ್ಥ್ಯ ಹೊಂದಿದ್ದ ಭಾರತ-ಪಾಕಿಸ್ತಾನ ಯುದ್ಧ ಆರಂಭಿಸಿದ್ದರೆ ಲಕ್ಷಾಂತರ ಜನ ಪ್ರಾಣ ಕಳೆದುಕೊಳ್ಳಬೇಕಾಗಿತ್ತು. ನಾನು ಮಧ್ಯೆ ಪ್ರವೇಶಿಸುವ ಮೂಲಕ ಯುದ್ಧಕ್ಕೆ ಅಂತ್ಯ ಹಾಡಿದ್ದೇನೆ. 10 ತಿಂಗಳಲ್ಲಿ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಈ ಕೆಲಸ ಬೇರೆ ಯಾರಿಂದಲೂ ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಟ್ರಂಪ್ ಸುಮಾರು 70ಕ್ಕೂ ಅಧಿಕ ಸಲ ಹೇಳಿಕೊಂಡಿದ್ದಾರೆ. ಆದರೆ ಮೂರನೇ ದೇಶದ ಮಧ್ಯಸ್ಥಿಕೆಯನ್ನು ಭಾರತ ನಿರಾಕರಿಸುತ್ತಲೇ ಬಂದಿದೆ.

ಭಾರತ-ಪಾಕಿಸ್ತಾನ ಸಂಘರ್ಷವನ್ನು ಕೊನೆಗೊಳಿಸುವ ಮೂಲಕ ಕನಿಷ್ಠ ಒಂದು ಕೋಟಿ ಜನರ ಪ್ರಾಣವನ್ನು ಉಳಿಸಿದ್ದೇನೆ ಎಂದಿದ್ದಾರೆ.

ಆದರೆ ಭಾರತ ವಿದೇಶಾಂಗ ಸಚಿವಾಲಯ ಪಾಕಿಸ್ತಾನ ಜೊತೆಗಿನ ಸಂಘರ್ಷವನ್ನು ಕೊನೆಗಾಣಿಸುವಲ್ಲಿ ಮೂರನೆಯ ದೇಶದ ಪಾತ್ರವನ್ನು ನಿರಾಕರಿಸುತ್ತಾ ಬಂದಿದೆ. ಟ್ರಂಪ್‌ ಮಾತ್ರ ಭಾರತ- ಪಾಕಿಸ್ತಾನ ಸೇರಿದಂತೆ ಹಲವಾರು ದೇಶಗಳ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್‌ ಶಾಂತಿ ಪುರಸ್ಕಾರ ಲಭಿಸಬೇಕಿತ್ತು. ಈ ಪ್ರಶಸ್ತಿಗೆ ತಮ್ಮ ಹೆಸರನ್ನು ಪರಿಗಣಿಸಲಿಲ್ಲ ಎಂದೂ ಟ್ರಂಪ್ ಕಿಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

More articles

Latest article

Most read