ನರೇಗಾ ಯೋಜನೆಗಿಂತ ವಿಬಿಜಿ ರಾಮ್‌ ಜಿ ಆಪಾಯಕಾರಿ ಎಂಬ ಸತ್ಯ ಬಿಚ್ಚಿಟ್ಟಿದ್ದೇ ರಾಜ್ಯಪಾಲರು ಭಾಷಣ ಓದಲು ನಿರಾಕರಿಸಲು ಕಾರಣ!!!

ಬೆಂಗಳೂರು:ಇಂದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಓದಲು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಥ್‌ ಅವರು ನಿರಾಕರಿಸಿದ್ದಾರೆ. ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿಜಿ ರಾಮ್‌ ಜಿ ಯೋಜನೆಯನ್ನು ಜಾರಿಗೊಳಿಸಿರುವುದನ್ನು ರಾಜ್ಯ ಸರಕಾರ ಖಂಡಿಸಿದೆ. ಕೇಂದ್ರ ಸರ್ಕಾರದ ಈ ಯೋಜನೆಯಿಂದ ಗ್ರಾಮೀಣ ಬಡವರು ಮತ್ತು ರಾಜ್ಯ ಸರ್ಕಾರಗಳ ಮೇಲೆ ಆರ್ಥಿಕ ಹೊರೆ ಬೀಳುತ್ತದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಇದೇ ಕಾರಣಕ್ಕೆ ರಾಜ್ಯಪಾಲರು ಭಾಷಣ ಓದಲು ನಿರಾಕರಿಸಿದ್ದಾರೆ.

ಹಾಗಾದರೆ ನರೇಗಾ ಯೋಜನೆ ಮತ್ತು ವಿಬಿಜಿ ರಾಮ್‌ ಜಿ ಯೋಜನೆಯ ವ್ಯತ್ಯಾಸಗಳನ್ನು ಸರ್ಕಾರ ಗುರುತಿಸಿದೆ. ಅದರ ಮುಖ್ಯಾಂಶಗಳು ಹೀಗಿವೆ.

ರಾಜ್ಯವು ಒಕ್ಕೂಟ ವ್ಯವಸ್ಥೆಯಲ್ಲಿ ಆರ್ಥಿಕ ಮತ್ತು ನೀತಿಕಾರಕ ವಿಚಾರಗಳಲ್ಲಿ ದಮನಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗಳು, ಕೇಂದ್ರದ ಯೋಜನೆಗಳು, ವಿಶೇಷ ಯೋಜನೆಗಳು ಮುಂತಾದವುಗಳಲ್ಲಿ ಅನ್ಯಾಯಗಳಿಗೆ ತುತ್ತಾಗಿದೆ. ದೇಶದ ಆರ್ಥಿಕತೆಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕವನ್ನು ಆರ್ಥಿಕವಾಗಿ ದಮನಿಸಿದರೆ ಅದರ ಪರಿಣಾಮ ಇಡೀ ದೇಶದ ಮೇಲೆ ಉಂಟಾಗುತ್ತದೆ ಎಂಬುದನ್ನು ಒಕ್ಕೂಟ ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲಗಳು ರಾಜ್ಯಕ್ಕೆ ಸಿಗದೆ ವಂಚನೆಯಾಗಿದೆ ಎಂಬುದನ್ನು 16ನೇ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನ್ಯಾಯವು ಸರಿಯಾಗಬಹುದೆಂಬುದು ಸರ್ಕಾರದ ಖಚಿತ ನಂಬುಗೆಯಾಗಿದೆ.

 ಇಷ್ಟರ ನಡುವೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ” ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಆ ಮೂಲಕ ಗ್ರಾಮೀಣ ಪದೇಶದ ಕೂಲಿ ಕಾರ್ಮಿಕರು, ಸಣ್ಣ ರೈತರ, ಮಹಿಳೆಯರ ಉದ್ಯೋಗದ ಮತ್ತು ನಿರುದ್ಯೋಗ ಭತ್ಯೆಯ ಹಕ್ಕನ್ನು ಕಸಿದುಕೊಂಡಿದೆ. ಗ್ರಾಮೀಣ ಭಾರತದ ಅಭಿವೃದ್ಧಿ ಪರ್ವದ ಬೃಹತ್ ಅಧ್ಯಾಯವಾಗಿದ್ದ “ಮನರೇಗಾ” ಕಾಯ್ದೆಯ ರದ್ಧತಿಯ ಮೂಲಕ ಭಾರತೀಯ ಗ್ರಾಮೀಣ ಬದುಕನ್ನು ದುರ್ಬಲಗೊಳಿಸಲಾಗಿದೆ.

ಗಾಂಧೀಜಿಯವರು, ಗ್ರಾಮಗಳು ಸ್ವತಂತ್ರವಾದ, ಸ್ವಾಯತ್ತವಾದ ಘಟಕಗಳಾಗಬೇಕು ಎಂದು ಆಶಿಸಿದ್ದರು, “ಗ್ರಾಮಗಳು ನಾಶವಾದಲ್ಲಿ ಭಾರತವೂ ನಾಶವಾಗುತ್ತದೆ. ಈ ದೇಶ ಯಾವ ಸಂದೇಶವನ್ನು ಜಗತ್ತಿಗೆ ನೀಡಬೇಕೋ ಅದು ಇಲ್ಲವಾಗುತ್ತದೆ. ಗ್ರಾಮಗಳನ್ನು ಶೋಷಣೆ ಮಾಡುವುದು ಪೂರ್ಣವಾಗಿ ನಿಂತರೆ ಮಾತ್ರವೇ ಗ್ರಾಮ ಪುನರುಜೀವನ ಸಾಧ್ಯವಾದೀತು. ಗ್ರಾಮಗಳು ಸ್ವಾವಲಂಬಿಗಳಾಗುವ ಕಡೆಗೆ ನಮ್ಮ ಗಮನವನ್ನೆಲ್ಲ ಕೇಂದ್ರೀಕರಿಸಬೇಕು”ಎಂದಿದ್ದರು. ಗ್ರಾಮಗಳು ಕೊಳಕು ಕೂಪಗಳಾಗಬಾರದು. ಅನ್ನ ಉದ್ಯೋಗಗಳನ್ನು ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗಬಾರದೆಂಬುದೂ ಸಹ ಗಾಂಧೀಜಿಯವರ ಅಭಿಪ್ರಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು 2005 ರಲ್ಲಿ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ”ಯನ್ನು ಪ್ರಾರಂಭಿಸಿತ್ತು. ಈ ಯೋಜನೆಯಲ್ಲಿ ರಾಜ್ಯವು ಕಳೆದ 20 ವರ್ಷಗಳಲ್ಲಿ 76.89 ಲಕ್ಷ ಕಾಮಗಾರಿಗಳನ್ನು 61.03 ಸಾವಿರ ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. 182.5 ಕೋಟಿ ಮಾನವ ದಿನಗಳಷ್ಟು ಉದ್ಯೋಗವನ್ನು ಸೃಜಿಸಿದೆ.

ಮನರೇಗಾ ಕಾಯ್ದೆಯು ಖಾತ್ರಿ ಮಾಡಿದ್ದ ಉದ್ಯೋಗದ ಖಾತ್ರಿಯನ್ನು ಹೊಸ ವಿಬಿ ಗ್ರಾಮ್ ಜಿ ಕಾಯ್ದೆಯು ಕಿತ್ತುಕೊಂಡಿದೆ. ಮನರೇಗಾ ಕಾಯ್ದೆಯ ಸೆಕ್ಷನ್ 3 ರ ಪುಕಾರ ಯಾವುದೇ ಪಂಚಾಯಿತಿಯಲ್ಲಿ ಉದ್ಯೋಗ ನೀಡಬೇಕೆಂದು ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ಉದ್ಯೋಗ ನೀಡಬೇಕೆಂದು ಸ್ಪಷ್ಟವಾಗಿ ನಮೂದಿಸಲಾಗಿದೆ.

ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕೆಂಬ ತತ್ತ್ವವನ್ನು ಧ್ವಂಸ ಮಾಡಿ ಪೂರೈಕೆ ಆಧಾರಿತ ಯೋಜನೆ ಮಾಡಲಾಗಿದೆ. ಕಾರ್ಪೊರೇಟ್ ಬಂಡವಾಳಿಗರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ, ‘ವಿಬಿ ಗ್ರಾ ಜಿ’ ಯೋಜನೆಯನ್ನು ರೂಪಿಸಲಾಗಿದೆ.

ಮನರೇಗಾ ಯೋಜನೆಯಲ್ಲಿದ್ದ ಗಾಂಧೀಜಿಯವರ ಪ್ರಧಾನ ಆಶಯವಾದ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಹೊಸ ಕಾಯ್ದೆಯು ದುರ್ಬಲಗೊಳಿಸಿದೆ. ರಾಷ್ಟ್ರದ ಪುಜಾಸತ್ತೆಗೆ ಮೂಲಭೂತ ಅಡಿಪಾಯ ಒದಗಿಸುವ ಪಂಚಾಯತ್‌ ರಾಜ್ ಸಂಸ್ಥೆಗಳು ಅಧಿಕಾರ ವಿಕೇಂದ್ರಿಕರಣದ ಸಂಕೇತಗಳು. ಈ ವಿಕೇಂದ್ರಿಕೃತ ವ್ಯವಸ್ಥೆಯ ಅಡಿಪಾಯವನ್ನೇ ಬುಡಮೇಲು ಮಾಡಿ ಕೇಂದ್ರಿಕೃತ ವ್ಯವಸ್ಥೆಗೆ ಕೇಂದ್ರ ಸರ್ಕಾರವು ಬುನಾದಿ ಹಾಕಿದೆ. ಮನರೇಗಾ ಕಾಯ್ದೆಯಲ್ಲಿ ಕಾಮಗಾರಿಗಳನ್ನು ಗ್ರಾಮ ಸಭೆಗಳಲ್ಲಿಟ್ಟು ತೀರ್ಮಾನ ಮಾಡಿ ಅನುಷ್ಠಾನ ಮಾಡಲಾಗುತ್ತಿತ್ತು. ಹೊಸ ಕಾಯ್ದೆಯಲ್ಲಿ ಗ್ರಾಮಸಭೆಗಳಿಗಿದ್ದ ಅಧಿಕಾರವನ್ನು ಕೇಂದ್ರ ಸರ್ಕಾರದ ಮಾನದಂಡಗಳ ಮೂಲಕ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಕೇಂದ್ರದ ಈ ಕ್ರಮಗಳು ಕೇವಲ ಪ್ರಜಾಸತ್ತಾತ್ಮಕತೆಗೆ ವಿರೋಧಿ ಮಾತ್ರ ಅಲ್ಲ, ರಾಷ್ಟ್ರದ ಬಹುಪಾಲು ನಾಗರೀಕರ ಬೇಡಿಕೆಗಳನ್ನು ನಿರ್ಲಕ್ಷಿಸುವ ಮತ್ತು ರಾಷ್ಟ್ರದ ಹಿತಾಸಕ್ತಿಯನ್ನು ವಿನಾಶದ ಅಂಚಿಗೆ ದೂಡುವ ಪಗತಿ ವಿರೋಧಿ ಕ್ರಮವಾಗಿದೆ.

ನರೇಗಾ ಯೋಜನೆಯಿಂದಾಗಿ ಗುಳೆ ಹೋಗುವ ಸಮಸ್ಯೆ ಕಡಿಮೆಯಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ ನಿರ್ಧಾರಗಳನ್ನು ಕೇಂದ್ರದಿಂದ ಹೇರಲಾಗುತ್ತದೆ. ದೆಹಲಿಯಲ್ಲಿ ಅಧಿಕಾರಿಗಳ ಪರಿಷತ್ತನ್ನು ರಚಿಸಲಾಗುತ್ತದೆ. ಈ ಅಧಿಕಾರಿಗಳ ಪರಿಷತ್ತು ಯಾವ ಪಂಚಾಯಿತಿಗಳಲ್ಲಿ ಈ ಯೋಜನೆಗಳನ್ನು ಜಾರಿಗೆ ತರಬೇಕೆಂಬುದನ್ನು ನಿರ್ಣಯಿಸುತ್ತದೆ. ಉದ್ಯೋಗ ಅರಸಿ ದೊಡ್ಡ ದೊಡ್ಡ ಪಟ್ಟಣಗಳಿಗೆ ಗುಳೆ ಹೋಗುವ ಅಥವಾ ವಲಸೆ ಹೋಗುವ ವ್ಯವಸ್ಥೆಯನ್ನು ಪುನರ್ ಸ್ಥಾಪಿಸುವ ಈ ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ನನ್ನ ಸರ್ಕಾರ ಅತ್ಯಂತ ಪ್ರಬಲವಾಗಿ ವಿರೋಧಿಸುತ್ತದೆ. ಮನರೇಗಾ ಕಾಯ್ದೆಯು ದಲಿತರು, ಆದಿವಾಸಿಗಳು, ಮಹಿಳೆಯರು, ಹಿಂದುಳಿದವರು, ರೈತಾಪಿ ಸಮುದಾಯಗಳ ಜನರ ಉದ್ಯೋಗದ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ.

ಉದ್ಯೋಗ ಖಾತ್ರಿಗೆ ಸಂಬಂಧಿಸಿದ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಕಾಯ್ದೆಯನ್ನು ಜಾರಿಗೊಳಿಸುವಾಗ ರಾಜ್ಯಗಳ ಅಭಿಪ್ರಾಯ ಪಡೆಯಬೇಕಾಗಿತ್ತು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಗಳ ಪಾಲೂ ಇರುತ್ತದೆ. ಹೀಗಿರುವಾಗ ರಾಜ್ಯಗಳನ್ನು ಸಂಪರ್ಕಿಸದೆ ಜಾರಿಗೊಳಿಸಿರುವುದು ಸಂವಿಧಾನ ಬಾಹಿರ ನಡೆಯಾಗಿರುತ್ತದೆ.

ಮನರೇಗಾದಲ್ಲಿದ್ದ ಕಾರ್ಮಿಕ ಕೇಂದ್ರಿತ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ಗುತ್ತಿಗೆದಾರರ ಅಧೀನಕ್ಕೆ ನೀಡಲಾಗುತ್ತಿದೆ. ಬೆಲೆಯೇರಿಕೆ, ಹಣದುಬ್ಬರಗಳನ್ನು ಆಧರಿಸಿ ಕೂಲಿಯನ್ನು ಪರಿಷ್ಕರಿಸುತ್ತಿದ್ದ ಅವಕಾಶಗಳೂ ಹೊಸ ಕಾಯ್ದೆಯಲ್ಲಿ ಕ್ಷೀಣಿಸಿವೆ. ಇದರಿಂದ ಬಡ ಕೂಲಿ ಕಾರ್ಮಿಕರ ಸಾಮಾಜಿಕ ಭದ್ರತೆಯು ಇಲ್ಲವಾಗುತ್ತಿದೆ.

ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆದು ಹಾಕಲಾಗಿದೆ. ಕೇಂದ್ರ ಸರ್ಕಾರದ ನೀತಿಗಳಿಂದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಗಳು ಹೊಸ ಕಾಯ್ದೆಯ ಪ್ರಕಾರ ಶೇ.40 ರಷ್ಟು ಅನುದಾನವನ್ನು ನೀಡಬೇಕಾಗುತ್ತದೆ. ರಾಜ್ಯವು ಅನುದಾನ ನೀಡದಿದ್ದರೆ ಕೇಂದ್ರವು ‘ವಿ ಗ್ರಾಮ್ ಜಿ’ ಯೋಜನೆಗೆ ಅನುದಾನಗಳನ್ನು ನೀಡುವುದಿಲ್ಲ. ಹಾಗಾಗಿ ಯೋಜನೆಯು ನಿಧಾನವಾಗಿ ಅವಸಾನದ ಹಾದಿಯ ಕಡೆಗೆ ತೆರಳುತ್ತದೆ ಎಂದು ಭಾಷಣದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

More articles

Latest article

Most read