ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಮಂಡ್ಯ: ಸಿಎಲ್‌–7 ಪರವಾನಗಿ ನೀಡಲು ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್‌.ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಮೇರೆಗೆ ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಅಬಕಾರಿ ಉಪ ಆಯುಕ್ತರ ಅಮಾನತು ಆದೇಶ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

2025 ರ ಆಗಸ್ಟ್‌ ತಿಂಗಳಲ್ಲಿ ಸುಂದರ್‌ ಎಂಬವರಿಗೆ ಅಬಕಾರಿ ಉಪ ಆಯುಕ್ತ, ಆರ್ ನಾಗಶಯನ ರೂ.60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಾಗಶಯನ ಅವರ ಧ್ವನಿಯೆಂದು ಹೇಳಲಾದ ಆಡಿಯೊ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಕುರಿತು ಶಿಸ್ತುಕ್ರಮ ಜರುಗಿಸುವ ಸಂಬಂಧ ಅಬಕಾರಿ ಆಯುಕ್ತರ ಕಚೇರಿಯಿಂದ ಕಾರಣ ಕೇಳಿ ನೋಟಿಸ್‌ ನೀಡಲಾಗಿತ್ತು.

ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿತ ಅಧಿಕಾರಿ ನಾಗಶಯನ ನೀಡಿದ ಕಾರಣಗಳನ್ನು ಪರಿಶೀಲಿಸಿದ ಬಳಿಕ, ಆರೋಪಿಯು ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ನಾಗಶಯನರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ಅಲ್ಲದೆ ಅಮಾನತ್ತಿನ ಅವಧಿಯಲ್ಲಿ ನಾಗಶಯನ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

More articles

Latest article

Most read