ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಪ್ರಕರಣ; ವದಂತಿ ಹರಡುವವರ ವಿರುದ್ಧ ಕಾನೂನು ಕ್ರಮ; ಜಿಲ್ಲಾ ವರಿಷ್ಠಾಧಿಕಾರಿ.

ಬೆಳ್ತಂಗಡಿ : ಸಂಬೋಳ್ಯದಲ್ಲಿ ನಡೆದ ಸುಮಂತ್ ನಿಗೂಢ ಸಾವಿನ ಪ್ರಕರಣದ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ, ಇನ್ನೂ ಎಫ್ ಎಸ್ ಎಲ್ ವರದಿಗಳು ಬಂದಿಲ್ಲ, ‌ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕೆಲಸ ಮಾಡುತ್ತಿದ್ದಾರೆ, ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಮತ್ತು ವದಂತಿಗಳನ್ನು ಹರಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಫೆ. 3 ರಂದು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ “ಸಂಬೋಳ್ಯ”ದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ, ಮುಳುಗುವಿಕೆ ಕಾರಣದಿಂದ (drowning) ಮೃತ್ಯು ಸಂಭವಿಸಿದೆ. ಆದರೆ ಸುಮಂತ್ ನ ತಲೆಯ ಹಿಂಭಾಗ ಹಾಗೂ ಮುಂಭಾಗದಲ್ಲಿ ಆಗಿದ್ದ ಗಾಯದ ಕಾರಣ ಸಂಶಯ ಉಂಟಾಗಿ ಪ್ರಕರಣವನ್ನು ಸಂಪೂರ್ಣ ಹಾಗೂ ಸಮಗ್ರವಾಗಿ ತನಿಖೆ ನಡೆಸುವ ಉದ್ದೇಶದಿಂದ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವೈದ್ಯಕೀಯ ನ್ಯಾಯವಿಜ್ಞಾನ (Forensic) ಹಾಗೂ ಅಂತಿಮ ಮರಣೋತ್ತರ ಪರೀಕ್ಷಾ (Final PM) ವರದಿ ಇನ್ನೂ ಬರಬೇಕಿದ್ದು ಅಲ್ಲಿಯವರೆಗೆ ಇದು ಹತ್ಯೆಯೇ ಅಥವಾ ಅಸಹಜ( UDR ) ಸಾವೇ ಎಂಬುದರ ಬಗ್ಗೆ ಈಗಲೇ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ತನಿಖೆ ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸುವ ದಿಸೆಯಲ್ಲಿ ನಡೆಯುತ್ತಿದೆ; ಆದರೆ ವಿಚಾರಣೆಗೊಳಪಡಿಸಲಾದ ಪ್ರತಿಯೊಬ್ಬರೂ ಆರೋಪಿಗಳು ಎನ್ನುವುದಿಲ್ಲ. ಈ ಪ್ರಕರಣದ ಸಮಗ್ರ ತನಿಖೆ ನಡೆಸಲು ನಾಲ್ಕು ವಿಶೇಷ ತನಿಖಾ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

More articles

Latest article

Most read