ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟೀಯ ಭದ್ರತಾ ಕಾಯ್ದೆ (ಎನ್ ಎಸ್ ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ.ಆಂಗ್ಮೋ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 9 ಕ್ಕೆ ಮುಂದೂಡಿದೆ.

ವಾಂಗ್ಚುಕ್ ಅವರ ಆರೋಗ್ಯ ತೀವ್ರ ಹದಗೆಟ್ಟಿದೆ, ಬಂಧನದ ಕ್ರಮವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ನ್ಯಾಯಪೀಠವು ಸರ್ಕಾರಕ್ಕೆ ಬುಧವಾರ ಸೂಚಿಸಿತ್ತು, ನಂತರ ಇಂದು ವಿಚಾರಣೆ ಮುಂದುವರೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರ ಪೀಠವು ವಿಚಾರಣೆಯನ್ನು ಫೆ 9 ಕ್ಕೆ ಮುಂದೂಡಿದೆ.


