ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಫೆಬ್ರವರಿ 18 ರಿಂದ 22 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ
ಲೂಲಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ, ನಂತರ ಅವರ ಗೌರವಾರ್ಥವಾಗಿ ಭಾರತದ ಅಧ್ಯಕ್ಷೆ ದ್ರೌಪದಿ ಮುರ್ಮು ಆಯೋಜಿಸಿರುವ ಔತಣಕೂಟ ಮತ್ತು ಫೆಬ್ರವರಿ 19 ಮತ್ತು 20 ರಂದು ನಡೆಯಲಿರುವ AI ಶೃಂಗಸಭೆಯಲ್ಲಿ ಭಾಗವಹಿಸುವುದು ಬ್ರೆಜಿಲ್ ಅಧ್ಯಕ್ಷರ ಭಾರತ ಪ್ರವಾಸದ ಕಾರ್ಯಕ್ರಮಗಳಲ್ಲಿ ಸೇರಿವೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.


