ಬೈರತಿ ಬಸವರಾಜು ಪೊಲೀಸರ ವಶಕ್ಕೆ

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ   ಬಿಕ್ಲು ಶಿವ ಸಾವು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆ  ಬಿಜೆಪಿ ಶಾಸಕ ಬೈರತಿ ಬಸವರಾಜ್​ನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. 

ಬಂಧನ ಭೀತಿಯಿಂದ  ಭೈರತಿ ಬಸವರಾಜ್​​ ಹಲವು ದಿನಗಳಿಂದ ಕಣ್ಮರೆಯಾಗಿದ್ದರು. ಗುರುವಾರ ಸಂಜೆ ಇಂಡಿಗೋ 6E683 ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಪೊಲೀಸರು ಭೈರತಿ ಬಸವರಾಜ್​​ನನ್ನ ಏರ್​ಪೋರ್ಟ್​ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು,  ನಾಳೆ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.  ಸಿಐಡಿ ನ್ಯಾಯಾಧೀಶರ​​ ಎದುರು ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಲಿದೆ.

More articles

Latest article

Most read