ಹೊಸಕೋಟೆ ಬಳಿ ಭೀಕರ ಅಪಘಾತ : ಏಳು ಮಂದಿ ಸಾವು

ಅತಿವೇಗವೇ ಅಪಘಾತಕ್ಕೆ ಕಾರಣ

ಹೊಸಕೋಟೆ :   ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸೇರಿದಂತೆ ಏಳು ಮಂದಿ ಮೃತರಾಗಿದ್ದಾರೆ. ಮೃತರಲ್ಲಿ ಆರು ಮಂದಿ ಪಿಯು ಕಾಲೇಜಿ ವಿದ್ಯಾರ್ಥಿಗಳು ಎನ್ನಲಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 

ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರಿನವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್​​ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

More articles

Latest article

Most read