ಬೆಂಗಳೂರು : ಮಗಳ ಪರೀಕ್ಷೆಯನ್ನು ಮುಂದಿಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆಗಿದ್ದಾರೆ. ಪವಿತ್ರಾಳ ಮಗಳು ಹತ್ತನೆ ತರಗತಿ ವ್ಯಾಸಾಂಗ ಮಾಡುತ್ತಿದ್ದು, ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್ ಅಲ್ಲಿ ಮನವಿ ಮಾಡಿದ್ದರು. ಆದರೆ, ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.
ಈ ಹಿಂದೆ ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಕೆಲ ದಿನ ಅವಕಾಶ ನೀಡಿದ್ದ ಕೋರ್ಟ್ ನಂತರ ರದ್ದು ಮಾಡಿದೆ.


