ಬೆಂಗಳೂರು: ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ 500 ಕೋಟಿ ರೂ. ಅನುದಾನ ಬಂದಿದೆ ಎಂದು ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ.
ಐದು ಗ್ಯಾರೆಂಟಿ ಯೋಜನೆಗಳ ಪ್ರಯೋಜನ ಪಡೆಯದಿರುವ ಸಾವಿರಾರು ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ ಎಂದಿದ್ದಾರೆ.1000 ದಿನಗಳನ್ನು ಪೂರೈಸಿರುವ ರಾಜ್ಯ ಸರ್ಕಾರ 1000 ದಿನಗಳಲ್ಲಿ ಗ್ಯಾರೆಂಟಿ ಯೋಜನೆಗಳಿಗೆ 1.16 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದು, ಇದರಿಂದ ರಾಜ್ಯದ 1.37 ಕೋಟಿ ಕುಟುಂಬಗಳಿಗೆ ಅನುಕೂಲವಾಗಿದೆ ಎಂದರು.
ಖಾನಾಪುರ ತಾಲೂಕಿಗೆ ಈ ಯೋಜನೆಗಳಿಂದ ಪ್ರತಿ ತಿಂಗಳು 20 ಕೋಟಿ ರೂ. ಅನುದಾನ ಲಭ್ಯವಾಗುತ್ತಿದೆ ಗ್ಯಾರೆಂಟಿ ಯೋಜನೆಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 500 ಕೋಟಿ ರೂ.ಗೂ ಹೆಚ್ಚು ಅನುದಾನ ಲಭ್ಯವಾಗಿದೆ ಈ ಮೂಲಕ ಕಾರ್ಮಿಕರು, ರೈತರು, ಶ್ರಮಜೀವಿಗಳು, ಬಡವರು,ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಒತ್ತು ನೀಡಿದೆ ಎಂದು ಡಾ.ಅಂಜಲಿ ನಿಂಬಾಳ್ಕರ್ ವಿವರಿಸಿದ್ದಾರೆ.

