ಬೆಂಗಳೂರು: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ವಿವಿ ಕುಲಪತಿಗಳೂ ಒಪ್ಪಿಗೆ ಸೂಚಿಸಿದ್ದಾರೆ.
ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ ಸಲಹೆ ಕೊಡಿ. ಇದು ವಯಸ್ಕರಿಗೆ ಅಲ್ಲ, 16 ವರ್ಷದೊಳಗಿನ ವಿದ್ಯಾರ್ಥಿಗಳ ಫೋನ್ ಬ್ಯಾನ್ ಮಾಡೋ ಚಿಂತನೆ. ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಇದನ್ನ ಮಾಡಿದ್ದಾರೆ. ಸೋಷಿಯಲ್ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗುತ್ತಾ ಇದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಕುಲಪತಿಗಳು 16 ವರ್ಷ ಒಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವಂತೆ ಸಲಹೆ ನೀಡಿದರು. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚಿನ ದೈಹಿಕ ಚಟುವಟಿಕೆಗಳು ನಡೆಯದೇ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್, ಸೋಷಿಯಲ್ ಮೀಡಿಯಾ ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಆನ್ಲೈನ್ ಗೇಮಿಂಗ್, ಸೋಷಿಯಲ್ ಮೀಡಿಯಾ ಇವುಗಳೇ ಅವರ ಪ್ರಪಂಚವಾಗಿಬಿಟ್ಟಿದೆ.


