ಶಾಸಕ ಚಂದ್ರು ಲಮಾಣಿಗೆ 9 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೀಡಾದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜನಪ್ರತಿನಿಧಿಗಳ ನ್ಯಾಯಾಲಯ 9 ದಿನ ನ್ಯಾಯಾಂಗ ಬಂಧನದ ಆದೇಶ ನೀಡಿದೆ‌.

ಬಂಧಿತ ಶಾಸಕ ಚಂದ್ರು ಲಮಾಣಿ ಅವರನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡೆಸಿದಾಗ ನ್ಯಾಯಾಧೀಶರಾದ ಗಜಾನನ ಭಟ್‌ ಅವರು ಶಾಸಕರು ಮತ್ತು ಅವರ ಆಪ್ತರಿಬ್ಬರಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನ ಹಿನ್ನೆಲೆ ಚಂದ್ರು ಲಮಾಣಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್‌ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

More articles

Latest article

Most read