ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧ : ಇರಾನ್‌ನಿಂದ ಸೌದಿ, ಖತಾರ್ ಮೇಲೆ ಕ್ಷಿಪಣಿ ಮಳೆ

ದುಬೈ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಈಗ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಡೀ ಕೊಲ್ಲಿ ಪ್ರದೇಶವು ಯುದ್ಧದ ರಣರಂಗವಾಗಿ ಮಾರ್ಪಟ್ಟಿದೆ. ಕೇವಲ ಇಸ್ರೇಲ್ ಮಾತ್ರವಲ್ಲದೆ, ಇರಾನ್ ಈಗ ಅಮೆರಿಕದ ಮಿತ್ರರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಖತಾರ್ ಮೇಲೆ ಪ್ರಬಲ ದಾಳಿ ನಡೆಸುವ ಮೂಲಕ ಯುದ್ಧವನ್ನು ವಿಸ್ತರಿಸಿದೆ.

ರಿಯಾದ್‌ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ

ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕೋರ್ಸ್ (IRGC) ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಅಮೆರಿಕ ರಾಯಭಾರ ಕಚೇರಿಯ ಆವರಣದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದರ ಜೊತೆಗೆ ಜಾಗತಿಕ ತೈಲ ಮಾರುಕಟ್ಟೆಯ ಬೆನ್ನೆಲುಬಾದ ‘ಸೌದಿ ಆರಾಮಕೋ’ ತೈಲ ಘಟಕಗಳ ಮೇಲೆಯೂ ಇರಾನ್ ಕ್ಷಿಪಣಿಗಳನ್ನು ಪ್ರಯೋಗಿಸಿ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗಿದೆ.

ಖತಾರ್ ವಾಯುಪಡೆಯ ದಿಟ್ಟ ಉತ್ತರ

ಇತ್ತ ಖತಾರ್ ತನ್ನ ವಾಯುಪ್ರದೇಶವನ್ನು ಪ್ರವೇಶಿಸಿದ ಇರಾನ್‌ನ ಎರಡು ಎಸ್‌ಯು-24 (SU-24) ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಘೋಷಿಸಿದೆ. ಅಲ್ಲದೆ, ಏಳು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಐದು ಇರಾನಿ ಡ್ರೋನ್‌ಗಳನ್ನು ಖತಾರ್‌ನ ಏರ್ ಡಿಫೆನ್ಸ್ ವ್ಯವಸ್ಥೆಯು ಯಶಸ್ವಿಯಾಗಿ ತಡೆದಿದೆ.

ಜಾಗತಿಕ ತೈಲ ಬಿಕ್ಕಟ್ಟು

ವಿಶ್ವದ ಅತಿ ದೊಡ್ಡ ತೈಲ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಇರಾನ್ ಮುಚ್ಚಿರುವುದು ಜಾಗತಿಕ ತೈಲ ಮತ್ತು ಅನಿಲ ಬೆಲೆಯಲ್ಲಿ ಭಾರೀ ಏರಿಕೆಗೆ ಕಾರಣವಾಗಿದೆ. ಯುದ್ಧದ ತೀವ್ರತೆಯಿಂದಾಗಿ ಇರಾನ್ ಮತ್ತು ಲೆಬನಾನ್‌ನಲ್ಲಿ ಸಾವಿನ ಸಂಖ್ಯೆ 600 ದಾಟಿದೆ. ಈ ನಡುವೆ, ಅಲ್ಲಿ ಸಿಲುಕಿರುವ ಸಾವಿರಾರು ಭಾರತೀಯರನ್ನು ಸ್ಥಳಾಂತರಿಸಲು ಏರ್ ಇಂಡಿಯಾ ಮತ್ತು ಇಂಡಿಗೋ ಸಂಸ್ಥೆಗಳು ವಿಶೇಷ ಕಾರ್ಯಾಚರಣೆ ಆರಂಭಿಸಿವೆ.  

More articles

Latest article

Most read