ಮಂಗಳುರು:- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲದಲ್ಲಿ ಇರುವ ಮಸೀದಿ ಬಳಿ ಬಾಂಬ್ ಸ್ಫೋಟಿಸುಬವುದಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಕಮೆಂಟ್ ಮಾಡಿದ್ದಾನೆ. ಉಳ್ಳಾಲ ಪೊಲೀಸರು ತಾವೇ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಮೆಂಟ್ ಮಾಡಿದ ಕಿಡಿಗೇಡಿಗಾಗಿ ಶೋಧ ನಡೆಸುತ್ತಿದ್ದಾರೆ. ಸಾರ್ವಜನಿಕರು ಬಳಸುವ ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು. ಇಲ್ಲದಿದ್ದರೆ ಚಿಕ್ಕ ಮಕ್ಕಳ ಮೆಲೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುಹಾಸ್ ಶೇಟ್ಟಿಯ ಭಾವಚಿತ್ರ ಇರುವ ಇನ್ಸ್ಟಾಗ್ರಾಮ್ ಖಾತೆಯಲ್ಲಿ ,ಶಂಕರ್11916 (shankar11916) ಎಂಬ ಕಿಡಿಗೇಡಿ ಯುವಕನೊಬ್ಬ ‘ಉಳ್ಳಾಲದ ಮಸೀದಿ ಹತ್ತಿರ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಕಾಮೆಂಟ್ ಮಾಡಲಾಗಿತ್ತು. ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕಮೆಂಟೆ ಅನ್ನು ಸೋಮವಾರ ಉಳ್ಳಾಲ ಸಾಮಾಜಿಕ ಜಾಲತಾಣಗಳ ಮೇಲ್ವಿಚಕರಾದ ಪೊಲೀಸ್ ಸಿಬ್ಬಂದಿ ಸಂತೋಷ ದೊಡ್ಡಮನಿ ಅವರು ಈ ಕಮೆಂಟ್ ಗಮನಿಸಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಧಾರ್ಮಿಕ ದ್ವೇಷ ಹುಟ್ಟಿಸುವ, ಭಯ ಹುಟ್ಟಿಸುವ ರೀತಿಯ ಪೋಸ್ಟ್ಗಳು ಅಥವಾ ಕಾಮೆಂಟ್ಗಳ ಮೇಲೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ತಕ್ಷಣ ಬಂಧಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು, ಪ್ರಚೋದನಕಾರಿ ಅಥವಾ ಭಯ ಹುಟ್ಟಿಸುವ ರೀತಿಯ ಪೋಸ್ಟ್ಗಳನ್ನು ಹಂಚಿಕೊಳ್ಳಬಾರದು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

