ಕೇಲವೇ ಕ್ಷಣಗಳಲ್ಲಿ 17ನೇ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ದಾಖಲೆಯ 17ನೇ ಬಜೆಟ್  ಮಂಡಿಸಲಿದ್ದಾರೆ. 
ಇದೀಗ ಸಿಎಂ ಸಿದ್ದರಾಮಯ್ಯ ಕೈಯಲ್ಲಿ ಬಜೆಟ್ ಸೂಟ್ ಕೇಸ್‌  ಹಿಡಿದುಕೊಂಡು ವಿಧಾನಸೌಧಕ್ಕೆ ಅಗಮಿಸಿದ್ದಾರೆ.  

ಬೆಳಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಜೆಟ್ ಭಾಷಣ ಶುರುವಾಗಲಿದೆ. ಹಣಕಾಸು ಸಚಿವರಾಗಿ ಇದು ಅವರ 17ನೇ ಬಜೆಟ್ ಆಗಿದ್ದು, ಸಿಎಂ ಆಗಿ 10ನೇ ಬಾರಿ ಆಯವ್ಯಯ ಮಂಡಿಸುತ್ತಿದ್ದಾರೆ.

ರಾಜ್ಯದಾದ್ಯಂತ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವಾಗಲಿದೆ. ಬಜೆಟ್ ಮಂಡನೆ ಬಳಿಕ ನಡೆಯುವ ಸಿಎಂ ಪತ್ರಿಕಾಗೋಷ್ಠಿಯೂ ಪರದೆಗಳ ಮೂಲಕ ನೇರ ಪ್ರಸಾರವಾಗಲಿದೆ. 

ಇದೀಗ ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. 

More articles

Latest article

Most read